ಪಾಟ್ನಾ: ಬಿಹಾರದಲ್ಲಿ ನಡೆದ ‘ಜೀವಿಪುತ್ರಿಕ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ 43 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿವೆ.ಜೀವಿಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ.
“ಇದುವರೆಗೆ ಒಟ್ಟು 43 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ) ಹೊರಡಿಸಿದ ಹೇಳಿಕೆ ತಿಳಿಸಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪೂರ್ವ ಮತ್ತು ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್ಪುರ, ಸಮಸ್ತಿಪುರ್, ಗೋಪಾಲ್ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಮುಳುಗಿದ ಘಟನೆಗಳು ವರದಿಯಾಗಿವೆ.