ಬೆಂಗಳೂರು : ರಾಜಧಾನಿಯ ಕೆ.ಆರ್. ಸರ್ಕಲ್ (KR Circle) ಜಂಕ್ಷನ್‌ನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಎಲೆಕ್ಟ್ರಿಕ್ ಬಸ್‌ವೊಂದು ಅತಿ ವೇಗವಾಗಿ ಬಂದು ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಲೆಕ್ಟ್ರಿಕ್ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆದ್ದು, ಚಾಲಕ ಸೇರಿದಂತೆ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಈ ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿ ಕಾಲು ಸಿಕ್ಕಿಹಾಕಿಕೊಂಡು ತೆಗೆಯಲು ಹರಸಾಹಸಪಟ್ಟರು.. ಕಬ್ಬಿಣದ ಸಲಾಕೆಗಳನ್ನು ಹರ ಸಾಹಸಪಟ್ಟು ತುಂಡರಿಸಿ ಮಹಿಳೆಯನ್ನು ಹೊರ ತೆಗೆಯಲಾಯಿತು. ಈ ಅಪಘಾತದ ಬಳಿಕ ಪ್ರಯಾಣಿಕರನ್ನು ರಕ್ಷಣೆ ಮಾಡಲು ಸತತ ಎರಡು ಗಂಟೆಗಳ ಕಾಲ ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟಿರುವುದು ಸಾರ್ವಜನಿಕ ಸಾರಿಗೆಯ ಮೇಲೆ ಜನ ಸಾಮಾನ್ಯರಲ್ಲಿ ಸುರಕ್ಷತೆಯ ವಿಚಾರದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.
ಇನ್ನು ಸರಣಿ ಅಪಘಾತದಲ್ಲಿ ಎರಡೂ ಬಸ್‌ಗಳು ನಜ್ಜುಗುಜ್ಜಾಗಿದ್ದು, ಕ್ರೇನ್ ಮೂಲಕ ಬಸ್‌ಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತದ ಪರಿಣಾಮ ಕೆಆರ್ ಸರ್ಕಲ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ






