
ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಜನಕ್ಕೆ ಗಾಯಗಳಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾತ್ರಿಯ ವೇಳೆ ಅಡುಗೆ ಮಾಡಿ ಗ್ಯಾಸ್ ಆಫ್ ಮಾಡುವುದನ್ನು ಮರೆತು ಮಲಗಿದ್ದರು.ಬೆಳಗ್ಗೆ ಎಳುತ್ತಿದ್ದಂತೆ ಗ್ಯಾಸ್ ಆನ್ ಮಾಡಲು ಬೆಂಕಿ ಕಡ್ಡಿ ಹಚ್ಚಿದಾಗ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದ್ದು, ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತವಾಗಿದೆ.
ಸಿಲಿಂಡರ್ ಸ್ಫೋಟದಿಂದ ಇಬ್ಬರು ದಂಪತಿ ಹಾಗೂ ಓರ್ವ ಬಾಲಕಿ ಸೇರಿದಂತೆ ಒಟ್ಟು ಆರು ಜನರಿಗೆ ಗಾಯಗಳಾಗಿದ್ದು, ಅದರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.










