• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಿಜೆಪಿಯವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ?: ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
February 21, 2024
in Uncategorized
0
ಬಿಜೆಪಿಯವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ?: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಜೆಪಿ(BJP) ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಬಿಜೆಪಿ(BJP) ಪರಿವಾರದವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ? ಎಂದು ಮುಖ್ಯಮಂತ್ರಿ(Chief Minister) ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.

ADVERTISEMENT

ಇಂದು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ(Freedom) ಹೋರಾಟದಲ್ಲಿ ಅಪ್ಪಿತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ? ದೇಶದ(Country) ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು(Jail) ಸೇರಿದ ಕಾಂಗ್ರೆಸ್ಸಿ(Congress)ನವರೇ ನಿಜವಾದ ರಾಷ್ಟ್ರೀಯವಾದಿಗಳು ಎಂದಿದ್ದಾರೆ.‌

ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ(BJP) ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ(Freedom Fight) ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ(History) ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸ ಮತ್ತು ಚರಿತ್ರೆಯಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದಿದ್ದಾರೆ.‌

ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು. ನಮ್ಮ ಸಂವಿಧಾನ(Constituency) ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಅನ್ಯಾಯ ಆಗುತ್ತಿದೆ ಎಂದು ಹೇಳಿದರು.‌

ರಾಜ್ಯದಿಂದ ವಾರ್ಷಿಕ(Annual) 4.30 ಲಕ್ಷ ಕೋಟಿ ರೂ. ತೆರಿಗೆ ಹೋಗುತ್ತಿದೆ. ತೆರಿಗೆ(Tax) ಹಂಚಿಕೆಯಲ್ಲಿ 2023-24ಕ್ಕೆ 37,252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ ರೂ.13,005 ಕೋಟಿ, ಒಟ್ಟು ರೂ.50,257 ಕೋಟಿ ಮಾತ್ರ ಬರುತ್ತಿದೆ. ಕೇಂದ್ರದ ಬಜೆಟ್(Budget) ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ಧವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್(Budget) ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ(Kannadiga) ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ ಎಂದು ಹೇಳಿದರು.

ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ. ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎನ್ನುತ್ತಾರೆ. ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ(BJP) ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಯಂತಿದೆ ಎಂದು ಹೇಳಿದ್ದರು ಎಂದು ಮಾತನಾಡಿದರು. ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು? ಎಂದು ಪ್ರಶ್ನಿಸಿದರು.‌

ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರು, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ? ಎಂದರು. ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾಗುತ್ತಿದೆ. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ರೂ.24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ರೂ.51,000 ಕೋಟಿ ಮಾತ್ರ ಬಂತು. 2020-21ನೇ ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ರೂ.30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ರೂ.31,734 ಕೋಟಿ, 2021-22 ರಲ್ಲಿ ರೂ.34,83,236 ಕೋಟಿ ಗಾತ್ರದ ಬಜೆಟ್ ಗೆ, ರಾಜ್ಯಕ್ಕೆ ರೂ.48,589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ರೂ. 41,81,232 ಕೋಟಿ, ರಾಜ್ಯಕ್ಕೆ ರೂ.53,510 ಕೋಟಿ ಮಾತ್ರ ಬಂತು. 2023-24ರಲ್ಲಿ ರೂ.45,03,007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ರೂ.50,257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ರೂ.59,785 ಕೋಟಿ ಬರುತ್ತದೆ. ಈ ರೀತಿ ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದಾರೆ. ಅದೇ ಪ್ರಧಾನಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ 2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ‘ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ?’ ಎಂದಿದ್ದರು.‌ ಕೇಂದ್ರದ ಯುಪಿಎ ಸರ್ಕಾರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ? ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಹೇಳಿದರು.‌ ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ಅಂಕಿಅಂಶಗಳಿಲ್ಲದೇ ನಾನು ಯಾವುದೇ ಮಾತನ್ನು ಹೇಳುವುದಿಲ್ಲ. ವಿರೋಧ ಪಕ್ಷದವರ ಟೀಕೆ ಸರಿಯಾಗಿದ್ದರೆ, ಸರಿಪಡಿಸಿಕೊಳ್ಳಲು ಬದ್ಧರಾಗಿದ್ದೇವೆ ಎಂದರು.
KarnatakaAssemblySession #karnataka #bengaluru #siddaramaiah #bjp #congress

Previous Post

ರಾಜಕೀಯಕ್ಕೆ ಬರಬೇಕಾ? ಲೋಕಸಭಾ ಚುನಾವಣೆಗೆ ನಿಲ್ಲಬೇಕಾ? ಎಂದು ನಿರ್ಧಾರ ಮಾಡಿಲ್ಲ: ಸಿ.ಎನ್‌. ಮಂಜುನಾಥ್‌

Next Post

ಸೌಜನ್ಯ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟೀಸ್

Related Posts

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ
Uncategorized

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ; ಅರ್ಜಿ ಸಲ್ಲಿಸುವವರಿಗೆ ಹೆಚ್ಚುವರಿ ಹೊರೆ

by ಪ್ರತಿಧ್ವನಿ
June 25, 2026
0

ನವದೆಹಲಿ: ಹೊಸ ಪಾಸ್‌ಪೋರ್ಟ್ ಪಡೆಯಲು ಅಥವಾ ಪಾಸ್‌ಪೋರ್ಟ್ ಸಂಬಂಧಿತ ಸೇವೆಗಳಿಗೆ ಅರ್ಜಿ ಸಲ್ಲಿಸಲು ಯೋಜಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಜುಲೈ 1ರಿಂದ ಪಾಸ್‌ಪೋರ್ಟ್ ಅರ್ಜಿ...

Read moreDetails
ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

June 20, 2026
ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

June 17, 2026
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

June 16, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

June 9, 2026
Next Post
ಸೌಜನ್ಯ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟೀಸ್

ಸೌಜನ್ಯ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada