• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಹೇಗೆ ಸಾಧ್ಯ? ; ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಬಹಳ ದೊಡ್ಡ ಮಟ್ಟದ ವಿವಾದವಾಗಿ ಮಾರ್ಪಡುವ ಎಲ್ಲಾ ಸಾಧ್ಯತೆಗಳು ಕೂಡ ದಟ್ಟವಾಗಿ ಕಾಣುತ್ತಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಮೈಸೂರಿನಲ್ಲಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, “40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ?, ಇದೀಗ ತನಿಖೆ ಪ್ರಗತಿಯಲ್ಲಿದೆ, ತಪ್ಪು ಮಾಡದೇ ಇರುವವರಿಗೆ ಬಿಲ್ ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ, ತಪ್ಪು ಮಾಡಿರುವವರಿಗೆ ಆ ಬಗ್ಗೆ ಭಯ ಇರುತ್ತದೆ, ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.
ಬಿಜೆಪಿಯವರಿಗೆ ಏನು ವಿಚಾರ ಇಲ್ಲದೇ ಇರುವುದರಿಂದ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ, 40% ಕಮಿಷನ್ ಗಾಗಿಯೇ ಜನರು ಅವರನ್ನು ತಿರಸ್ಕರಿಸಿದ್ದಾರೆ, ಅಂದು ನಾವು ಮಾಡಿರುವ ಆರೋಪವನ್ನು ಈಗ ಸಾಬೀತು ಮಾಡಬೇಕಿದೆ, ಇದೇ ಕಾರಣದಿಂದ ನಾಲ್ಕು ಟೀಂ ತನಿಖೆ ಮಾಡುತ್ತೇವೆ, ನಡೆದಿರುವ ಕಾಮಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿವೆ, ಈಗ ಬಿಲ್ ಗಾಗಿ ಆತುರ ಪಟ್ಟರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ನೀರಿಗಾಗಿ ತಮಿಳುನಾಡು ಖ್ಯಾತೆಗೆ ಸಿಎಂ ಪ್ರತಿಕ್ರಿಯೆ

ತಮಿಳುನಾಡು ಕಾವೇರಿ ನೀರು ಬಿಡುವಂತೆ ಮತ್ತೆ ಖ್ಯಾತೆ ಆರಂಭಿಸಿದೆ, ಈ ಬಾರಿ ನೀರಿಕ್ಷಿತ ಮಟ್ಟದ ಮಳೆಯಾಗಿಲ್ಲ, ಹೀಗಾಗಿ ಸಂಕಷ್ಟದ ಸೂತ್ರವನ್ನು ಎರೆಡು ರಾಜ್ಯಗಳು ಪಾಲಿಸಬೇಕಿದೆ, ಆದರೂ ತಮಿಳುನಾಡು ನೀರು ಬಿಡುವಂತೆ ಖ್ಯಾತೆ ಶುರು ಮಾಡಿದೆ, ಈ ಬಗ್ಗೆ ನಮ್ಮ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲಾ ಎಂದು ಪರೋಕ್ಷವಾಗಿ ಉತ್ತರವನ್ನ ಕೊಟ್ಟಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ.

ನಿನ್ನೆ ಬಿಬಿಎಂಪಿಯಲ್ಲಿ ಬೆಂಕಿ ಬಿದ್ದ ಪ್ರಕರಣ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಹಲವು ಅನುಮಾನಗಳನ್ನ ಕೂಡ ಹುಟ್ಟಿ ಹಾಕಿವೆ, ಹೀಗಾಗಿ ಈಗಾಗ್ಲೆ ತನಿಖೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಹಲವು ಕ್ರಮಗಳನ್ನ ಕೂಡ ಕೈಗೊಂಡಿದೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ, 40% ಗಿಂತ ಕಡಿಮೆ ಕಡಿಮೆ ಗಾಯವಾಗಿರುವವರಿಗೆ ತೊಂದರೆ ಇಲ್ಲ, ಒಬ್ಬರಿಗೆ 40% ಗಿಂತ ಹೆಚ್ಚು ಗಾಯವಾಗಿದೆ, ಎಲ್ಲಾ ಗಾಯಾಳುಗಳಿಗೂ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ, ಎಂದು ಹೇಳಿಕೆ ನೀಡಿದ್ದಾರೆ.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗೆ ಸಮಿತಿ

ಇನ್ನು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತ ವಿಚಾರಕ್ಕೆ ಸಂಬಂಧ ಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಇದಕ್ಕಾಗಿ ಒಂದು ಸಮಿತಿ ಮಾಡಿದ್ದೇವೆ, ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ, ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ವಿಚಾರ, ವಾರ್ಡ್‌ಗಳ ಪುನರ್ ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಗಡುವು ನೀಡಿದೆ, ಆ ಗಡುವಿನೊಳಗೆ ವರದಿಗಳು ಸಿದ್ಧವಾಗಲಿವೆ, ಅದನ್ನು ಕೋರ್ಟಿಗೆ ನಾವು ನೀಡುತ್ತೇವೆ, ಚುನಾವಣೆ ವಿಚಾರದಲ್ಲಿ ನಾವು ಯಾವುತ್ತೂ ಹಿಂದೆ ಬಿದ್ದಿಲ್ಲ, ಬಿಜೆಪಿಯವರು ಚುನಾವಣೆಗಳನ್ನು ಮುಂದೂಡುತ್ತಿದ್ದರು, ನಾವು ಆ ರೀತಿ ಮಾಡುವುದಿಲ್ಲ, ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ, ಎಂದಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ

ಕೇಂದ್ರ ಸರ್ಕಾರದಿಂದ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿ ವಿಚಾರದ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ, ಕೇರಳದಲ್ಲೂ ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ, ನಾವೂ ಸಹ ಇದಕ್ಕೆ ವಿರೋಧ ಇದ್ದೇವೆ, ಎಂದು ಹೇಳುವ ಮೂಲಕ ಕರ್ನಾಟಕದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ ಆಗೋದಿಲ್ಲ ಅನ್ನೋದನ್ನ ಸ್ಪಷ್ಟ ಪಡಿಸಿದ್ದಾರೆ.

ನೋಂದಣಿ ಮುಗಿದ ಮೇಲೆ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ.

ಗೃಹ ಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಗೃಹ ಲಕ್ಷ್ಮಿ ಯೋಜನೆಗೆ 1.33 ಕೋಟಿ ಜನರ ನೋಂದಣಿ ಆಗಬೇಕು, ಇದುವರೆಗೆ 1.6 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಇನ್ನೂ ನೋಂದಣಿ ಬಾಕಿ ಇದೆ, ನೋಂದಣಿ ಪ್ರಕ್ರಿಯೆ ಮುಗಿಯಬೇಕು, ಆಗಸ್ಟ್ ಅಂತ್ಯದಲ್ಲೇ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ, ದಿನಾಂಕ ಮುಂದೂಡಿಕೆ ಆಗಿಲ್ಲ, ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದೇವೆ, ಇನ್ನೂ ಟೈಮ್ ಕೊಟ್ಟಿಲ್ಲ, ಎಂದು ಪ್ರತಿಕ್ರಿಯೆಯನ್ನ ನೀಡಿದ್ದಾರೆ.

Tags: BJPCongress PartyDKShivakumarಸಿದ್ದರಾಮಯ್ಯ
Previous Post

ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

Next Post

ಬಿಬಿಎಂಪಿ ಅಗ್ನಿ ದುರಂತ | ಹಗರಣದ ದಾಖಲೆ ನಾಶ ಯತ್ನ: ಎಎಪಿ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಬಿಬಿಎಂಪಿ ಅಗ್ನಿ ದುರಂತ

ಬಿಬಿಎಂಪಿ ಅಗ್ನಿ ದುರಂತ | ಹಗರಣದ ದಾಖಲೆ ನಾಶ ಯತ್ನ: ಎಎಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada