• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೈಕೋರ್ಟ್​ ಜಡ್ಜ್​ ಮನೆಯಲ್ಲಿ 15 ಕೋಟಿ.. ಸಿಕ್ಕಿದ್ಹೇಗೆ..? ಮುಂದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
March 22, 2025
in Top Story, ದೇಶ, ರಾಜಕೀಯ, ವಿಶೇಷ, ಶೋಧ
0
ಹೈಕೋರ್ಟ್​ ಜಡ್ಜ್​ ಮನೆಯಲ್ಲಿ 15 ಕೋಟಿ.. ಸಿಕ್ಕಿದ್ಹೇಗೆ..? ಮುಂದೇನು..?
Share on WhatsAppShare on FacebookShare on Telegram
ADVERTISEMENT

ಭ್ರಷ್ಟ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳ ಮನೆಯಲ್ಲಿ ಅಕ್ರಮ ಹಣ ಪತ್ತೆ ಆದಾಗ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ. ಕಾನೂನು ಮೂಲಕ ಭ್ರಷ್ಟರಿಗೆ ಕಠಿಣ ಶಿಕ್ಷೆ ಆಗಬೇಕು ಅಂತಾ ಜನ ಸಾಮಾನ್ಯರು ಬಯಸುವುದು ಉಂಟು. ಆದರೆ ಇದೀಗ ಹೈಕೋರ್ಟ್​ ನ್ಯಾಯಮೂರ್ತಿಗಳ ಮನೆಯಲ್ಲೇ​ ಕೋಟಿ ಕೋಟಿ ಹಣದ ರಾಶಿ ಪತ್ತೆಯಾಗಿದ್ದಯ, ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ಜಿಗುಪ್ಸೆ ಮೂಡುವಂತೆ ಮಾಡಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಬರೋಬ್ಬರಿ 15 ಕೋಟಿ ಹಾರ್ಡ್​ ಕ್ಯಾಶ್​ ಪತ್ತೆಯಾಗಿದೆ. ಇಡೀ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ..

2 ದಿನದ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಗ್ನಿ ಆಕಸ್ಮಿಕ ನಡೆದಿತ್ತು. ಕೂಡಲೇ ಮನೆಯಲ್ಲಿದ್ದವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ದೆಹಲಿ ಪೊಲೀಸರು ಆಗಮಿಸಿದ್ರು.. ಮನೆ ಒಳಗೆ ನುಗ್ಗಿ ಬೆಂಕಿ ನಂದಿಸುವಾಗ, ಒಂದು ಕೋಣೆಯಲ್ಲಿ ಸುಮಾರು 15 ಕೋಟಿ ನಗದು​ ಇರುವ ಬ್ಯಾಗ್​ ಪತ್ತೆಯಾಗಿದೆ.. ಕೂಡಲೇ ಹಿರಿಯ ಅಧಿಕಾರಿಗಳಿಗೆ ಈ ವಿಷಯ ಮುಟ್ಟಿಸಿದ್ದು, ಆ ಬಳಿಕ ಹೈಕೋರ್ಟ್​ ಜಡ್ಜ್​ ಯಶವಂತ್ ವರ್ಮಾ ಅವರ ಕೋಟಿ ಕೋಟಿ ಹಣದ ರಹಸ್ಯ ಬಯಲಾಗಿದೆ..

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಮನೆಯಲ್ಲಿ 15 ಕೋಟಿ ಹಣ ಸಿಕ್ಕಿದ್ದು ದೊಡ್ಡ ಸುದ್ದಿಯಾಗಿದೆ. ನ್ಯಾಯಾಧೀಶರಾದ ಯಶವಂತ್ ವರ್ಮಾ ಅವರನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ, ದೆಹಲಿ ಹೈಕೋರ್ಟ್​ನಿಂದ ಅಲಹಾಬಾದ್​​ಗೆ ವರ್ಗಾಯಿಸಿದೆ.. ಸುಪ್ರೀಂಕೋರ್ಟ್​​ನ ಈ ಕ್ರಮಕ್ಕೆ ಅಲಹಾಬಾದ್‌ ಬಾರ್ ​ಕೌನ್ಸಿಲ್ ವಿರೋಧಿಸಿದ್ದು, ಅಮಾನತು ಮಾಡ್ಬೇಕು ಅಂತಾ ಆಗ್ರಹಿಸಿದೆ.. ಅಲ್ಲದೇ ಉನ್ನತ ಮಟ್ಟದ ತನಿಖೆ ಮಾಡ್ಬೇಕು ಅಂತನೂ ಪಟ್ಟುಹಿಡಿದಿದೆ..

ಸುಪ್ರೀಂಕೋರ್ಟ್​ ಬಾರ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ವಿಕಾಸ್ ಸಿಂಗ್ ಮಾತನಾಡಿ, ಇದು ಬಹಳ ಗಂಭೀರವಾದ ವಿಷಯ. ಜನ ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನ್ಯಾಯಾಧೀಶರ ನಿವಾಸದಲ್ಲಿ ಹಣ ಸಿಕ್ಕಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ನ್ಯಾಯಮೂರ್ತಿಗಳನ್ನು ವರ್ಗಾವಣೆಯಲ್ಲ, ಆಂತರಿಕ ವಿಚಾರಣೆ ನಡೆಯಬೇಕು. ಅದಕ್ಕೂ ಮುನ್ನ ಜಡ್ಜ್‌ ರಾಜೀನಾಮೆ ಕೊಡಬೇಕು. ನ್ಯಾಯಾಲಯದಲ್ಲಿ ಕೇಸ್ ನಡೆಸಲು ಅವಕಾಶ ಕೊಡಬಾರದು. ಇದು ನ್ಯಾಯಾಂಗದ ಮೇಲಿನ ವಿಶ್ವಾಸಾರ್ಹತೆ ಅಲುಗಾಡಿಸುತ್ತದೆ ಎಂದಿದ್ದಾರೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಪತ್ತೆ ಆಗಿರುವ 15 ಕೋಟಿ ಹಣ, ಅಕ್ರಮದ ಹಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವಿಚಾರದ ಬಗ್ಗೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ನಾಯಕ ಜೈರಾಮ್​ ರಮೇಶ್​ ವಿಷಯ​ ಪ್ರಸ್ತಾಪಿಸಿದ್ದಾರೆ.. ಜಡ್ಜ್​ ಮನೆಯಲ್ಲಿ 15 ಕೋಟಿ ಪತ್ತೆ ಆಗಿರುವ ಬಗ್ಗೆ ಚರ್ಚೆ ಮಾಡ್ಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಬೆಳಗ್ಗೆ ನಾವು ಶಾಕಿಂಗ್​ ನ್ಯೂಸ್​​ ಓದಿದ್ವಿ. ದೆಹಲಿ ಹೈಕೋರ್ಟ್ ಜಡ್ಜ್​​ವೊಬ್ಬರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಸಂಸತ್ತಿನ 50 ಸದಸ್ಯರು ನೋಟಿಸ್​ ಸಲ್ಲಿಸಿದ್ದಾರೆ. ಅಲಹಾಬಾದ್​​ ಹೈಕೋರ್ಟ್​​ನ ನ್ಯಾಯಮೂರ್ತಿ ವಿರುದ್ಧ ದೋಷಾರೋಪಣೆ ಬಗ್ಗೆ ವಿಚಾರಣೆ ಆಗಬೇಕು. ನ್ಯಾಯಾಂಗಕ್ಕೂ ಹೊಣೆಗಾರಿಕೆ ವಿಧಿಸುವ ಕೆಲಸ ಆಗ್ಬೇಕು. ಈ ಪ್ರಕರಣ ಸೂಕ್ಷ್ಮವಾಗಿ ಅವಲೋಕಿಸಿ ತನಿಖೆಗೆ ವಹಿಸಿ ಎಂದು ಆಗ್ರಹಿಸಿದ್ದಾರೆ.

ಜೈರಾಂ ರಮೇಶ್‌ ಮಾತಿಗೆ ಪ್ರತಿಕ್ರಿಯಿಸಿದ ರಾಜ್ಯಸಭಾಧ್ಯಕ್ಷ ಜಗದೀಪ್​ ಧನ್ಕರ್​​​, ಈ ವಿಷಯ ಕುರಿತು ವಿಸ್ತೃತ ಚರ್ಚೆ ನಡೆಸಲು ಅಗತ್ಯ ಸಮಯವನ್ನು ನಿಗದಿಪಡಿಸಲಾಗುವುದು ಎಂದಿದ್ದಾರೆ. ಈ ವಿಚಾರವಾಗಿ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್​ ಖನ್ನಾ ಗಂಭೀರವಾಗಿ ಪರಿಗಣಿಸಿದ್ದಾರೆ. ಕೊಲಿಜಿಯಂ ಸದಸ್ಯರ ಜೊತೆ ಸಭೆ ಮಾಡಿ, 15 ಕೋಟಿ ನಗದು ಮನೆಯಲ್ಲಿ ಹೇಗೆ ಬಂತು..? ಕೇಸ್​ ಸೆಟಲ್​ಮೆಂಟ್​ಗೆ ಯಾರಾದ್ರೂ ತಂದುಕೊಟ್ಟಾ ಹಣನಾ,,? ಈ ಬಗ್ಗೆಯೂ ತನಿಖೆಗೂ ಸೂಚಿಸಲಾಗಿದೆ. ದೇಶದ ನ್ಯಾಯಾಂಗ ವ್ಯವಸ್ಥೆಗೆ ಕಪ್ಪು ಚುಕ್ಕೆ ಎನ್ನುವಂತಾಗಿದ್ದು, ಈ ಪ್ರಕರಣದಿಂದ ನ್ಯಾಯಾಂಗ ವ್ಯವಸ್ಥೆ ಕಣ್ತೆರೆಯುವಂತೆ ಆಗಬೇಕಿದೆ.

UT Khader: 18 ಶಾಸಕರನ್ನ 6 ತಿಂಗಳು ಅಮಾನತು ಮಾಡಿದ್ಯಾಕೆ ಗೊತ್ತಾ..! #speekar #bjp #18mla #pratidhvani
Tags: Allahabad High CourtBJPcash found in delhi high court judge housecash found in delhi high court judge yashwant verma homedelhi court judgedelhi hc judge house firedelhi high court cash scandaldelhi high court judgedelhi high court judge cash discoverydelhi high court judge transferhigh courthigh court judgehigh court judge delhilatest news in hindiPatiala House courtsupreme courtyashwant varma judgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೈಕಮಾಂಡ್​ಗೆ ಸಿಡಿ ತೋರಿಸುವ ಮೊದಲು.. ನಾನು ಹೇಳ್ತೇನೆ..

Next Post

ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada