• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಮತ ಎಣಿಕೆಗೆ ಸಿದ್ಧತೆ ಹೇಗಿದೆ..? ಸಿಎಂ ಡಿಸಿಎಂ ಏನಂದ್ರು..?

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ನಾಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ. ಸ್ಟ್ರಾಂಗ್​ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ನಾಳೆ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್​ ರೂಂ ಓಪನ್ ಮಾಡಲಾಗುತ್ತದೆ. 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ 15 ಟೇಬಲ್​ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಎಣಿಕಾ ಮೇಲ್ವಿಚಾರಕ, ಒಬ್ಬರು ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್​ವರ್ಸ್ ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರದ ಸುತ್ತ 100 ಮೀಟರ್ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭದ್ರತೆಗಾಗಿ CRPF, CASF, KSRP ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ.

ADVERTISEMENT

ಹೈ ವೋಲ್ಟೇಜ್ ಕಣ ಎಂದೇ ಗುರುತಿಸಿಕೊಂಡಿರುವ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ನಾಳೆ ನಡೆಯಲಿದೆ. ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಕ್ಷೇತ್ರದಲ್ಲಿ ಶೇಖಡಾ 88.80ರಷ್ಟು ಮತದಾನವಾಗಿತ್ತು. ಮೂರು ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಟ್ಟು 14 ಟೇಬಲ್, 69 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 20 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯೋಗೇಶ್ವರ್ ಮಧ್ಯೆ ಗೆಲ್ಲೋದ್ಯಾರು ಅನ್ನೋ ಕುತೂಹಲ ಮೂಡಿಸಿದೆ.

ಹಾವೇರಿಯ ಶಿಗ್ಗಾವಿ ಕ್ಷೇತ್ತದ ಮತ ಎಣಿಕೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮಧ್ಯೆ ಜಿದ್ದಾಜಿದ್ದಿನ ಪೈಪೊಟಿ ಏರ್ಪಟ್ಟಿದೆ.. ಇನ್ನು ಕ್ಷೇತ್ರದಲ್ಲಿ ಶೇಖಡ 80.48ರಷ್ಟು ಮತದಾನ ಆಗಿತ್ತು. ಇತ್ತ ಭರತ್ ಬೊಮ್ಮಾಯಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ರೆ, ಯಾಸೀರ್ ಪಠಾಣ್​ ಕೂಡಾ ನಾನೇ ಗೆಲ್ತೀನಿ ಅಂತಿದ್ದಾರೆ.ನಾಳೆ ಮತ ಎಣಿಕೆ ನಡೆಯಲಿದ್ದು ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಕ್ಸಿಟ್ ಪೋಲ್ ಸುಳ್ಳಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮೂರು ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಇದೆ.ಮಹಾರಾಷ್ಟ್ರ ಚುನಾವಣೆಯಲ್ಲೂ ಅಧಿಕಾರಕ್ಕೆ ನಾವೇ ಬರುತ್ತೇವೆ. ಮಾರ್ಜಿನ್​ ಇಲ್ಲದೇ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇನ್ನು ಸಿಎಂ ಸಿದ್ದರಾಮಯ್ಯ ಕೂಡ ಮೂರು ಕ್ಷೇತ್ರಗಳನ್ನ ನಾವೇ ಗೆಲ್ತೇವೆ. ನಮ್ಮ ಪರವಾಗಿ ಜನರ ಒಲವಿದೆ. ಚನ್ನಪಟ್ಟಣ ಕೂಡ ನಾವೇ ಗೆಲ್ತೇವೆ ಎಂದಿದ್ದಾರೆ

Tags: BJPBy electionCASFCM Siddaramaiah‌Congress PartyCRPFDCM DK ShivakumarJDSKSRP.opened tomorrow at 7 am.Sandur Assembly Constituency
Previous Post

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

Next Post

ಪ್ರವೀರ್ ಶೆಟ್ಟಿ ಸಿನಿಮಾಗೆ ‘ಬಘೀರ’ ಬಲ…ನಿದ್ರಾದೇವಿ Next door ಟೀಸರ್ ರಿಲೀಸ್

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
Next Post

ಪ್ರವೀರ್ ಶೆಟ್ಟಿ ಸಿನಿಮಾಗೆ 'ಬಘೀರ' ಬಲ…ನಿದ್ರಾದೇವಿ Next door ಟೀಸರ್ ರಿಲೀಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada