
ಕೊಪ್ಪಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಜೋರಾಗಿದ್ದು, ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ MLC ಹೇಮಲತಾ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ. ರೈತರ, ಮಠ ಮಾನ್ಯಗಳು, ಜನಸಾಮಾನ್ಯರ ಭೂಮಿಯನ್ನು ವಕ್ಫ್ ಕಬಳಿಸ್ತಿದೆ ಅಂತ ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರೈತರ ಭೂಮಿ, ಮಠ, ದೇಗಲಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡಿದೆ ಅಂತ ಆರೋಪಿಸಿರುವ ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಕುತಂತ್ರದಿಂದಲೇ ಹೀಗಾಗ್ತಿದೆ ಅಂತ ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

ಬೆಳಗಾವಿಯ ಚಿಕ್ಕೋಡಿ AC ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಪಾದನಾ ಚರಮೂರ್ತಿ ಮಠದ ಶ್ರೀಗಳ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆದಿದೆ. ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ ವೋಟ್ ಬ್ಯಾಂಕ್ಗಾಗಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ಸರ್ಕಾರ ಹೇಳುತ್ತಿದೆ. ನಾನು ಮೂರು ಬಾರಿ ಶಾಸಕಿ ಎರಡು ಬಾರಿ ಮಂತ್ರಿ ಆಗಿದ್ದೆ. ನನ್ನ ಜಮೀನು ಕೂಡಾ ವಕ್ಫ್ ಅಂತ ನೋಟಿಸ್ ಕೊಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಶ್ರೀವತ್ಸಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ವಿಜಯಪುರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಬಿಜೆಪಿ ಬೀದಿಗಿಳಿದಿದೆ. ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಱಲಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿ ಅನೇಕರು ಭಾಗಿಯಾಗಿದ್ದಾರೆ.

ರಾಮನಗರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅಂತ ಬ್ಯಾನರ್ ಹಿಡಿದು ಬೆಂಗಳೂರು – ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ನಾಯಕರು ರೈತರಿಂದ ಮನವಿ ಆಲಿಸಿದ್ದಾರೆ
ರಾಯಚೂರಲ್ಲಿ ವಕ್ಪ್ ವಿರುದ್ಧ ಬಿಜೆಪಿ ಪ್ರತಿಭಟನೆ ಜೋರಾಗಿದೆ. ಟಿಪ್ಪು ಸುಲ್ತಾನ್ ಮೈದಾನದಲ್ಲಿ ರಾಯಚೂರು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಮ್ಮ ಭೂಮಿ ನಮ್ಮ ಹಕ್ಕು ಅಂತ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ
ಮಂಗಳೂರಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ದಾವಣಗೆರೆಯಲ್ಲೂ ವಕ್ಪ್ ಪ್ರತಿಭಟನೆ ಜೋರಾಗಿದೆ. ದಾವಣಗೆರೆ ಪಾಲಿಕೆ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಚಿವ ಜಮೀರ್ ಅಹಮದ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.











