• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಪ್ರತಿಭಟನೆ ಹೇಗಿದೆ..? ಎಲ್ಲೆಲ್ಲಿ ಯಾರ್ಯಾರು ಭಾಗಿ..?

ಕೃಷ್ಣ ಮಣಿ by ಕೃಷ್ಣ ಮಣಿ
November 22, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಪ್ರತಿಭಟನೆ ಹೇಗಿದೆ..? ಎಲ್ಲೆಲ್ಲಿ ಯಾರ್ಯಾರು ಭಾಗಿ..?
Share on WhatsAppShare on FacebookShare on Telegram

ಕೊಪ್ಪಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಜೋರಾಗಿದ್ದು, ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ MLC ಹೇಮಲತಾ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ. ರೈತರ, ಮಠ ಮಾನ್ಯಗಳು, ಜನಸಾಮಾನ್ಯರ ಭೂಮಿಯನ್ನು ವಕ್ಫ್ ಕಬಳಿಸ್ತಿದೆ ಅಂತ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರೈತರ ಭೂಮಿ, ಮಠ, ದೇಗಲಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡಿದೆ ಅಂತ ಆರೋಪಿಸಿರುವ ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಕುತಂತ್ರದಿಂದಲೇ ಹೀಗಾಗ್ತಿದೆ ಅಂತ ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

ಬೆಳಗಾವಿಯ ಚಿಕ್ಕೋಡಿ AC ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಪಾದನಾ ಚರಮೂರ್ತಿ ಮಠದ ಶ್ರೀಗಳ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆದಿದೆ. ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ ವೋಟ್​ ಬ್ಯಾಂಕ್​ಗಾಗಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ಸರ್ಕಾರ ಹೇಳುತ್ತಿದೆ. ನಾನು ಮೂರು ಬಾರಿ ಶಾಸಕಿ ಎರಡು ಬಾರಿ ಮಂತ್ರಿ ಆಗಿದ್ದೆ. ನನ್ನ ಜಮೀನು ಕೂಡಾ ವಕ್ಫ್ ಅಂತ ನೋಟಿಸ್ ಕೊಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಶ್ರೀವತ್ಸಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ವಿಜಯಪುರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಬಿಜೆಪಿ ಬೀದಿಗಿಳಿದಿದೆ. ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಱಲಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿ ಅನೇಕರು ಭಾಗಿಯಾಗಿದ್ದಾರೆ.

ರಾಮನಗರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅಂತ ಬ್ಯಾನರ್ ಹಿಡಿದು ಬೆಂಗಳೂರು – ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ನಾಯಕರು ರೈತರಿಂದ ಮನವಿ ಆಲಿಸಿದ್ದಾರೆ

ರಾಯಚೂರಲ್ಲಿ ವಕ್ಪ್ ವಿರುದ್ಧ ಬಿಜೆಪಿ ಪ್ರತಿಭಟನೆ ಜೋರಾಗಿದೆ. ಟಿಪ್ಪು ಸುಲ್ತಾನ್ ಮೈದಾನದಲ್ಲಿ ರಾಯಚೂರು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಮ್ಮ ಭೂಮಿ ನಮ್ಮ ಹಕ್ಕು ಅಂತ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ

JUSTICE  SRISHANANDA SPEECH :  ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದರವರ ಅದ್ಭುತ ಭಾಷಣ  #pratidhvani

ಮಂಗಳೂರಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಟೌನ್​ ಹಾಲ್ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ದಾವಣಗೆರೆಯಲ್ಲೂ ವಕ್ಪ್ ಪ್ರತಿಭಟನೆ ಜೋರಾಗಿದೆ. ದಾವಣಗೆರೆ ಪಾಲಿಕೆ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಚಿವ ಜಮೀರ್ ಅಹಮದ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Tags: daily news analysisindian expressindian express analysisindian express analysis todayindian express editorial analysisindian express editorial analysis todayindian express newsindian express newspaper todaythe hindu analysisthe hindu and indian express analysisthe indian express editorial analysisthe indian express newspaper analysisthe indian express newspaper analysis study iqthe indian express newspaper analysis today
Previous Post

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ:ರಕ್ಷಿಸುತ್ತಿರುವವರು ಯಾರು:ಸಿ.ಎಂ.ಸಿದ್ದರಾಮಯ್ಯ

Next Post

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

Related Posts

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

September 22, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
Next Post

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada