• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಅಂಕಣ
0
ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಮೋದಿಯವರ ಖಾಲಿ ಚೊಂಬಿಗೆ ಸರಣಿ ಪ್ರಶ್ನೆಗಳನ್ನು ಮುಂದಿಟ್ಟು ದೇವೇಗೌಡರಿಗೆ ಉತ್ತರ ಕೇಳಿದ ಸಿ.ಎಂ.ಸಿದ್ದರಾಮಯ್ಯ

ADVERTISEMENT

ಮೋದಿಯವರು ರಾಜ್ಯಕ್ಕೆ ನೀಡಿದ ಖಾಲಿ ಚೊಂಬನ್ನು ಕೋಲಾರದ ಜೆಡಿಎಸ್ ಅಭ್ಯರ್ಥಿ ಕೈಗೆ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ರನ್ನು ಗೆಲ್ಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

ಕೋಲಾರ (ಬಂಗಾರಪೇಟೆ) ಯ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಹೈಲೈಟ್ಸ್…

ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರು

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ

ಬಾಕ್ಸ್

ರೋಡ್ ಶೋ ನಲ್ಲಿ ಚೊಂಬಿನ ಸದ್ದು

ಬಂಗಾರಪೇಟೆಯಲ್ಲಿ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು.

ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು.

ಮೋದಿಯವರು ನಿಮ್ಮ ಅಕೌಂಟಿಗೆ 15 ಲಕ್ಷ ಹಾಕ್ತೀನಿ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರಲ್ಲಾ , ಎಷ್ಟು ರೈತರಿಗೆ ದುಪ್ಪಟ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

…ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಕೈಗೆ ಅವರ ಖಾಲಿಚೊಂಬನ್ನು ಅವರಿಗೇ ವಾಪಾಸ್ ಕೊಡಿ ಎಂದು ಕರೆ ನೀಡಿದರು.

ಬಾಕ್ಸ್ 2

ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್ ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

Tags: Congress Partysiddaramaiahಎಚ್ ಡಿ ಕುಮಾರಸ್ವಾಮಿದೇವೇಗೌಡನರೇಂದ್ರ ಮೋದಿಬಿಜೆಪಿ
Previous Post

Throat pain: ಗಂಟಲು ನೋವಿಗೆ ಇಲ್ಲಿದೆ ತಕ್ಷಣದ ಪರಿಹಾರ

Next Post

ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

Related Posts

ನಗರ-ಬಂಡವಾಳ ಮತ್ತು ನಾಗರಿಕ ಜಗತ್ತು
Top Story

ನಗರ-ಬಂಡವಾಳ ಮತ್ತು ನಾಗರಿಕ ಜಗತ್ತು

by ನಾ ದಿವಾಕರ
June 20, 2026
0

ಭಾರತದ ಆಳುವ ವರ್ಗಗಳಲ್ಲಿ ಪಕ್ಷಾತೀತವಾಗಿ ನೋಡಿದಾಗಲೂ ಒಂದು ಸಮಾನ ಎಳೆ ಕಾಣುತ್ತದೆ. ನಿಸರ್ಗದ ಹಸಿರು, ಪ್ರಕೃತಿಯೊಡಲ ಸಂಪನ್ಮೂಲಗಳು ಬರಿದಾಗುತ್ತಿರುವಾಗ ಕುಂಭಕರ್ಣನನ್ನು ಆವಾಹಿಸಿಕೊಂಡು ನಿದ್ರಾವಸ್ಥೆಗೆ ಜಾರುತ್ತಾರೆ. ಮಹಿಳೆಯರ ಮೇಲೆ,...

Read moreDetails
ಸಾಹಿತ್ಯ ಓದು ಮತ್ತು ಪುಸ್ತಕ ಸಂಸ್ಕೃತಿ

ಸಾಹಿತ್ಯ ಓದು ಮತ್ತು ಪುಸ್ತಕ ಸಂಸ್ಕೃತಿ

June 18, 2026
ಅಗೋಚರ ಬಡತನದ ಅಮೂರ್ತ ರೂಪಗಳು

ಅಗೋಚರ ಬಡತನದ ಅಮೂರ್ತ ರೂಪಗಳು

June 17, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
ದುಬೈನಿಂದ ಚಿನ್ನ ಸಾಗಣೆಗೆ ಹೈಟೆಕ್ ಐಡಿಯಾ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಯಲಾಯಿತು ರಹಸ್ಯ

ಎಸ್‌ಐಆರ್‌ ಅನುಮೋದಿಸುವ ಸುಪ್ರೀಂ ತೀರ್ಪು

June 11, 2026
Next Post
ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada