• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊರೋನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಇಚ್ಛೆ ಬಂದಂತೆ ತೆರಿಗೆ ಹಾಕುವುದು ಎಷ್ಟು ಸರಿ? : ರಾಜ್ಯ,ಕೇಂದ್ರ ಸರ್ಕಾರದ ವಿರುದ್ಧ ಎಚ್‌ಡಿಕೆ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
September 16, 2021
in ಕರ್ನಾಟಕ, ರಾಜಕೀಯ
0
ಎಚ್‌ಡಿಕೆ ವರ್ಸಸ್‌ ಸುಮಲತಾ; ಮಂಡ್ಯ ರಾಜಕೀಯ ಮತ್ತು ಕೆಆರ್‌ಎಸ್‌ ಡ್ಯಾಂ ಸುತ್ತ ಒಂದು ನೋಟ

The Chief Minister of Karnataka, Shri H.D. Kumaraswamy meeting the Union Minister for Consumer Affairs, Food and Public Distribution, Shri Ram Vilas Paswan, in New Delhi on October 06, 2018.

Share on WhatsAppShare on FacebookShare on Telegram

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಜಿಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ADVERTISEMENT

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್‌ನಿಂದ ತತ್ತರಿಸಿರುವ ಜನರ ಬದುಕು ಕಟ್ಟಲು ಒಂದು ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿಂದು ನಿಯಮ-69ರ ಅಡಿಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ನೆರೆ, ಕೋವಿಡ್ʼನಿಂದ ಸಾಮಾನ್ಯ ಜನ ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಿಕ್ಕಟ್ಟನ್ನು ಸರಕಾರ ಉಪೇಕ್ಷೆ ಮಾಡಬಾರದು. ಈ ವರ್ಷವನ್ನು ʼಕೋವಿಡ್ ವರ್ಷʼ ಎಂದು ಘೋಷಣೆ ಮಾಡಿ. ಕಷ್ಟದಲ್ಲಿರುವ 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಕೊನೆಯ ಪಕ್ಷ ಪ್ರತಿ ಕುಟುಂಬಕ್ಕೆ 25,000 ರೂ. ಧನ ಸಹಾಯ ಮಾಡಿ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ. ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರ್ಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು.

ಸರ್ಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?

ಅತಿಯಾದ ಭಾರವನ್ನು ಹೊರಲಾಗದ ಎತ್ತಿನ ಗಾಡಿಯ ಅಸಹಾಯಕ ಎತ್ತಿನಂತಿದೆ ಜನ ಸಾಮಾನ್ಯನ ಬದುಕು. ಭಾರವನ್ನು ಹೊರಲಾಗದಿದ್ದರೆ ಎತ್ತಿಗೆ ಛಡಿಯೇಟು ತಪ್ಪಿಲ್ಲ. ಹಾಗೆಯೇ, ಭಾರದಿಂದ ಗಾಡಿ ಚಕ್ರ ನೆಲದಲ್ಲಿ ಹೂತರೆ ಅದನ್ನು ಎಳೆಯಲಾಗದಿದ್ದರೆ ಪುನಾ ಆ ಎತ್ತಿಗೇ ಛಡಿಯೇಟು. ಜನ ಸಾಮಾನ್ಯನ ಪರಿಸ್ಥಿತಿಯೂ ಇದೇ ಆಗಿದೆ. ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾನೆ ಅವನು. ಇಂಥ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ರಾಜಕೀಯ ಮಾಡುವ ಬದಲು ಎಲ್ಲರೂ ಪಕ್ಷಾತೀತವಾಗಿ ವರ್ತಿಸಬೇಕು. ಸರ್ಕಾರ ಕೂಡ ಅತ್ಯಂತ ಮಾನವೀಯತೆಯಿಂದ ಜನರ ನೆರವಿಗೆ ಧಾವಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಬೆಲೆ ಏರಿಕೆ ಮಾಡುವುದು ಎಂದರೆ ನಿರಂತರವಾಗಿ ಹತೋಟಿ ಇಲ್ಲದೆ ಮಾಡುವುದಲ್ಲ. ಅದಕ್ಕೆ ಒಂದು ವೈಜ್ಞಾನಿಕ ಮಾನದಂಡದ ಜತೆಗೆ ಜನರ ಪರಿಸ್ಥಿತಿಯನ್ನೂ ನೋಡಿ ನಿರ್ಧಾರ ಕೈಗೊಳ್ಳುವ ವಿವೇಚನೆ ಇರಬೇಕು. ಅದು ಬಿಟ್ಟು ಇಷ್ಟಬಂದ ಹಾಗೆ ಬೆಲೆ ಏರಿಕೆ ಮಾಡುತ್ತಾ ಹೋದರೆ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ಪತ್ರಿಕೆಯೊಂದು ಸಮೀಕ್ಷೆ ನಡೆಸಿರುವ ಪ್ರಕಾರ ಒಬ್ಬ ಸಾಮಾನ್ಯ ವ್ಯಕ್ತಿ ವರ್ಷಕ್ಕೆ ಸರಾಸರಿ ಒಂದು ಲಕ್ಷ ರೂಪಾಯಿ  ತೆರಿಗೆಯನ್ನು ಸರಕಾರಕ್ಕೆ ಕಟ್ಟುತ್ತಿದ್ದಾನೆ. ಅಷ್ಟು ತೆರಿಗೆ ಕಟ್ಟುವ ಸಾಮಾನ್ಯನ ಬದುಕು ಈಗ ಅಯೋಮಯವಾಗಿದೆ. ಅವನ ಬದುಕನ್ನು ಸರಿ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬ ಸಂಗತಿಯನ್ನು ಸರ್ಕಾರ ಮರೆಯುವಂತಿಲ್ಲ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಸರ್ಕಾರ ಕೆಲ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಬೆಲೆ ಏರಿಯಿಂದ ಬಸವಳಿದಿರುವ ಜನರ ನೆರವಿಗೆ ಧಾವಿಸಲು ಆ ಹಣ ಮೀಸಲಿಟ್ಟು ಆ ಎಲ್ಲ ಯೋಜನೆಗಳನ್ನು ಒಂದು ವರ್ಷ ಮುಂದಕ್ಕೆ ಹಾಕಿ. ಈ ವರ್ಷವನ್ನು ʼಕೋವಿಡ್ ವರ್ಷʼವೆಂದು ಘೋಷಣೆ ಮಾಡಲಿ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ಜನರ ನೆರವಿಗೆ ಧಾವಿಸಲಿ.

ಕಾವೇರಮ್ಮ ಎಂಬ ಬೆಂಗಳೂರು ದಕ್ಷಿಣ ಭಾಗದ ಮಹಿಳೆ ಒಂದು ಪತ್ರಿಕೆಯಲ್ಲಿ ಹೀಗೆ ಹೇಳಿಕೊಂಡಿದ್ದಾಳೆ. “ನನ್ನ ಮನೆಯಲ್ಲಿ ಅಡುಗೆ ಅನಿಲದ ಸ್ಟೌವ್ ಹಚ್ಚಲೂ ಆಗುತ್ತಿಲ್ಲ. ಬದುಕು ನಡೆಸುವುದೇ ದುಸ್ಥರವಾಗಿದೆ” ಎಂದು ಕಣ್ಣೀರು ಹಾಕಿದ್ದಾರೆ. ಆ ಮನೆಯಲ್ಲಿ ಆರು ಜನ ಬದುಕುತ್ತಿದ್ದಾರೆ, ಅವರ ಹಸಿವು ನೀಗಬೇಕು. ಆ ಮಹಿಳೆಯ ಕಷ್ಟ ಯಾವ ರೀತಿಯಲ್ಲಿದೆ? ಆ ತಾಯಿಯ ಸಂಕಟವೇನು? ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಆಲೋಚನೆ ಮಾಡಬೇಕಿದೆ. ಇಂತಹ ಲಕ್ಷಾಂತರ ಕಾವೇರಮ್ಮನ ಕಥೆಗಳು ನಮ್ಮ ರಾಜ್ಯದಲ್ಲಿವೆ.

ನಾವೆಲ್ಲ ರಾಜಕೀಯವಾಗಿ ಒಬ್ಬರ ಮೇಲೊಬ್ಬರು ಟೀಕೆಟಿಪ್ಪಣಿ ಮಾಡಿಕೊಂಡು ಕೂರುವುದಲ್ಲ. ಎಲ್ಲರೂ ಕಾವೇರಮ್ಮನವರಂಥ ಜನರ ಕಷ್ಟಕ್ಕೆ ಧಾವಿಸಬೇಕು. ಅವರ ಜೀವನ ಸರಿ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಈ ಬಗ್ಗೆ ರಾಜಕೀಯ ಸಂಕುಚಿತ ಮನೋಭಾವ ತೋರಿಸುವುದು ಬೇಡ. ರಾಜಕೀಯ ಲಾಭದ ಬಗ್ಗೆ ಲೆಕ್ಕಾಚಾರ ಹಾಕುವುದೂ ಸರಿಯಲ್ಲ ಎಂದು ಅವರು ಮಾತನಾಡುವ ವೇಳೆ ಹೇಳಿದ್ದಾರೆ.

ಪಕ್ಷ ರಾಜಕಾರಣವನ್ನು ಬದಿಗೊತ್ತಿ ಸಂಕಷ್ಟದಲ್ಲಿರುವ ಜನ ಸಾಮಾನ್ಯನಿಗೆ ಏನು ಮಾಡಬೇಕೋ, ಅದರ ಬಗ್ಗೆ ಈ ವೇದಿಕೆಯಲ್ಲಿ ಯೋಚನೆ ಮಾಡಿ ಪರಿಹಾರ ಹುಡುಕಬೇಕಿದೆ. ಸರ್ಕಾರ ತಕ್ಷಣವೇ ಅವರ ನೆರವಿಗೆ ಧಾವಿಸಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ .

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ತಮ್ಮ ನೇತೃತ್ವದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನಡೆದ ಅಕ್ಕಿಭಾಗ್ಯದ ಅಸಲಿ ಕಥೆಯನ್ನು ಸದನದಲ್ಲಿ ಬಿಚ್ಚಿಟ್ಟರು ಹೆಚ್.ಡಿ.ಕುಮಾರಸ್ವಾಮಿ.

“ನನ್ನ ಸರಕಾರ ಬಂದಾಗ ಜನರಿಗೆ ಐದು ಕೆಜಿ ಅಕ್ಕಿಯನ್ನು ನೀಡಲಾಯಿತು. ಇದ್ದಕ್ಕಿದ್ದಂತೆ ಕಾಂಗ್ರೆಸ್ ನಾಯಕರು ದೊಡ್ಡ ಹುಯಿಲೆಬ್ಬಿಸಿದರು. ಐದು ಕೆಜಿ ಬದಲು ಏಳು ಕೆಜಿಯನ್ನೇ ಕೊಡಬೇಕು ಎಂದು ಹಠಕ್ಕೆ ಬಿದ್ದರು. ಆದರೆ, ಹಣಕಾಸು ಲಭ್ಯತೆ ನೋಡಿದರೆ ಕೇವಲ ಐದು ಕೆಜಿ ಅಕ್ಕಿಗೆ ಮಾತ್ರ ಹಣ ತೆಗೆದಿರಿಸಲಾಗಿತ್ತು.”

“ಉಳಿದ ಎರಡು ಕೆಜಿ ಅಕ್ಕಿಗೆ ಹಣ ತರುವುದು ಎಲ್ಲಿಂದ? ಚುನಾವಣೆಗೆ ಹೋಗುವ ಮುನ್ನ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ಐದು ಕೆಜಿ ಅಕ್ಕಿಗಷ್ಟೇ ಹಣ ಮೀಸಲಿಟ್ಟು ಹೋಗಿದ್ದರು. ಸಮ್ಮಿಶ್ರ ಸರಕಾರ ಬಂದಾಗ ಇದೇ ಜನ ಏಳು ಕೆಜಿ ಅಕ್ಕಿ ಕೊಡಬೇಕು ಎಂದು ಬೊಬ್ಬೆ ಹೊಡೆದರು. ಕೇವಲ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ಮಾಡಿದ ಕೆಲಸಕ್ಕೆ ಜನ ನಮ್ಮನ್ನು ಟೀಕೆ ಮಾಡುವಂತಾಯಿತು” ಎಂದು ಎಚ್ಡಿಕೆ ಹೇಳಿದ್ದಾರೆ.

“ಆಗ ನನಗೆ ಎಂಥ ಸಂದಿಗ್ಧತೆ ಎಂದರೆ, ಏಳು ಕೆಜಿ ಅಕ್ಕಿ ಕೊಡಲೇಬೇಕು, ಕೊಡೋಕೆ ದುಡ್ಡಿಲ್ಲ. ನಾವು ಘೋಷಣೆ ಮಾಡಿದ್ದೇವೆ, ನಿಲ್ಸಂಗಿಲ್ಲ ಎನ್ನುವ ಒತ್ತಡ ತಂತ್ರ ಬೇರೆ. ರಾಜ್ಯದ ಜನರಿಗೆ ಈ ಸತ್ಯಸಂಗತಿ ಗೊತ್ತಿಲ್ಲ. ಈಗ ಹೇಳುತ್ತಿದ್ದೇನೆ” ಎಂದು ಅವರು ಅಕ್ಕಿಭಾಗ್ಯದ ಅಸಲಿಯೆತ್ತನ್ನು ಬಯಲು ಮಾಡಿದರು.

ಇದಕ್ಕೆ ಸ್ಪಂದಿಸಿದ ಖಂದಾಯ ಸಚಿವ ಆರ್.‌ಅಶೋಕ್‌ರವರು, ಈ ಸತ್ಯ ರಾಜ್ಯದ ಜನರಿಗೆ ಗೊತ್ತಾಗಲಿ. ಇದುವರೆಗೂ ಈ ವಿಷಯ ನಮಗೂ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ.

Tags: BJPcompensationCongress PartyCovid 19JD(S) PartyJDSJDS KarnatakaPrice Hikeಎಚ್ ಡಿ ಕುಮಾರಸ್ವಾಮಿಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

T20 ವಿಶ್ವಕಪ್ ಬಳಿಕ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಕೊಹ್ಲಿ ಘೋಷಣೆ

Next Post

ಸೋನು ಸೂದ್ ಕಛೇರಿಗಳ ಕಾರ್ಯಚರಣೆ ನಂತರ, ಮನೆ ತನಿಖೆಗೆ ಮುಂದಾದ ಐಟಿ

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ಬ್ರೇಕಿಂಗ್ ನ್ಯೂಸ್: ನಟ ಸೋನುಸೂದ್‌ಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಐಟಿ ದಾಳಿ!

ಸೋನು ಸೂದ್ ಕಛೇರಿಗಳ ಕಾರ್ಯಚರಣೆ ನಂತರ, ಮನೆ ತನಿಖೆಗೆ ಮುಂದಾದ ಐಟಿ

Please login to join discussion

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada