
ಬೆಂಗಳೂರು: ಹೈಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳನ್ನು (HSRP) ನಂಬರ್ ಪ್ಲೇಟ್ ಬುಕಿಂಗ್ ಮಾಡಿದ ವ್ಯಕ್ತಿಯೊಬ್ಬ ಬರೋಬ್ಬರಿ 95 ಸಾವಿರ ರೂ. ಕಳೆದುಕೊಂಡ ಘಟನೆ ಬೆಂಗಳೂರು ನಡೆದಿದೆ.ವಿಜಿತ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿ.
ವಿಜಿತ್ ಕುಮಾರ್ ತಮ್ಮ ವಾಹನಕ್ಕೆ ನಂಬರ್ ಪ್ಲೇಟ್ ಬುಕ್ ಮಾಡಲು bookmyhsrp.net ಲಿಂಕ್‌ನಲ್ಲಿ ರಿಜಿಸ್ಟರ್ ಮಾಡಿದ್ದರು.ಆದರೆ, ಒಂದು ವಾರದ ನಂತರ ನಿಮ್ಮ ಅಡ್ರೆಸ್ ಸರಿ ಇಲ್ಲ, ಕೆಳಗೆ ಕೊಟ್ಟ ಲಿಂಕ್ ಕ್ಲಿಕ್ ಮಾಡಿ ಅಪ್ಡೇಟ್ ಮಾಡಿ ಎಂದು ಮೇಲ್ ಬಂದಿತ್ತು.
ಈ ಲಿಂಕ್ ಕ್ಲಿಕ್ ಮಾಡಿ ಅಡ್ರೆಸ್ ಅಪ್ಲೋಡ್ ಮಾಡಿದ್ದನು. ಇದಾದ 4 ದಿನಗಳಲ್ಲಿ ಹಂತ ಹಂತವಾಗಿ ವಿಜಿತ್‌ಕುಮಾರ್ ಕ್ರೆಡಿಟ್ ಕಾರ್ಡ್‌ನಿಂದ 95 ಸಾವಿರ ರೂ. ಹಣ ಕಡಿತವಾಗಿದೆ.ಘಟನೆಗೆ ಸಂಬಂಧಿಸಿ ಬಾಗಲೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಈಗ ವಿಜಿತ್‌ಕುಮಾರ್‌ನ ಇಮೇಲ್ ಐಡಿ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಪೊಲೀಸರು ಪಡೆದು, ಹಣ ಕಡಿತವಾಗಿರುವ ಬಗ್ಗೆ ತನಿಖೆ ಮಾಡುತ್ತಿದ್ದಾರೆ.