ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ, ತಮ್ಮ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಪವಿತ್ರಾ ಗೌಡ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿ 55 ದಿನಗಳಾಗಿದ್ದು, ಇದೀಗ ಬೈಲ್ ಅಪ್ಲಿಕೇಶನ್ ಹಾಕಿದ್ದಾರೆ. 57 ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು ಪವಿತ್ರಾ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ಈ ಜಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಲಯ ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿದ್ದು, ಸದ್ಯ ಆಗಸ್ಟ್ 22ಕ್ಕೆ ಅರ್ಜಿ ವಿಚಾರಣೆಯನ್ನ ನ್ಯಾಯಲಯ ಮುಂದೂಡಿಕೆ ಮಾಡಿದೆ.