ಮೂಡ ಹಗರಣ (MUDA scam) ವಿರೋಧಿಸಿ ಬೆಂಗಳೂರಿಂದ ಮೈಸೂರಿನವರೆಗೆ (Bangalore to mysore) ಮೈಸೂರು ಚಲೋ ಪಾದಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ಪಾಳ್ಯದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಚರ್ಚೆ ಜೋರಾಗಿತ್ತು.ಆದರೆ ಇದೀಗ ಆ ಚರ್ಚೆಗೆ ವಿಜಯೇಂದ್ರ (B Y vijayendra) ಬ್ರೇಕ್ ಹಾಕಿದ್ದಾರೆ.

ಶಾಸಕ ಬಸನಗೌಡ ಯತ್ನಾಳ್ (Basanagowda Patil yatnal) ನೇತೃತ್ವದಲ್ಲಿ ಬಳ್ಳಾರಿ ಚಲೋ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಜೋರಾಗಿದ್ದು,ಯತ್ನಾಳ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದರು. ವಾಲ್ಮೀಕಿ ನಿಗಮದ ಹಗರಣ ಕುರಿತು, ಬಳ್ಳಾರಿ ಚಲೋ ಪಾದಯಾತ್ರೆಗೆ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ,ಯಾವುದೇ ಪಕ್ಷದ ವೇದಿಕೆಯಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ನಾಯಕರು ಕೂಡ ಬಳ್ಳಾರಿ ಚಲೋ (Bellary chalo) ಮಾಡಬೇಕಾ ಎಂಬುದರ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಹೀಗಾಗಿ ಅಂತಹ ಯಾವುದೇ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಡಿಯೂರಪ್ಪ (Yediyurappa) ಕುಟುಂಬದ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಂತಾಗಿದೆ.