ಕೇಸರಿಪಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಿಯಾಗಿಯೇ ಚಾಟಿ ಬೀಸಿದ್ದಾರೆ. ಲೋಕ ಎಲೆಕ್ಷನ್ ಬೆನ್ನಲ್ಲೇ ಸರಿಯಾಗಿಯೇ ಬೆಂಡೆತ್ತಿದ್ದಾರೆ. ಸಂವಿಧಾನ ತಿದ್ದುಪಡಿ ಪ್ರಶ್ನೆ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.ಇಂದು ಸಂವಿಧಾನದ ಬಗ್ಗೆ ಮಾತನಾಡುವ ಬಿಜೆಪಿಯವರು, ಸಂವಿಧಾನ ಬದಲಾವಣೆ ಬಗ್ಗೆ ಎರಡು ಬಾರಿ ಮಾತನಾಡಿರುವ ಅನಂತ್ಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಏಕೆ? ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ ಏಕೆ? ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಹಿಂದಿನಿಂದಲೂ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ ಎಂದು ಬಿಜೆಪಿಗರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.
ಔಷಧಿಗಳ ಟೆಸ್ಟಿಂಗ್ ಸಮಯಕ್ಕೆ ಸರಿಯಾಗಿ ನಡೆಸಿ – ಡ್ರಗ್ ಕಂಟ್ರೋಲ್ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ...
Read moreDetails