ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ (Chennapattana bi-election) ಸಿಪಿ ಯೋಗೇಶ್ವರ್ (CP yogeshwar) ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ನಿಂದ ಸ್ಪರ್ಧೆ ಮಾಡಲಿದ್ದಾರಾ ಎಂಬ ಕುತೂಹಲ ಮನೆಮಾಡಿದೆ ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದಲ್ಲಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಮೈತ್ರಿಯಿಂದ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಲು ತೀರ್ಮಾನಿಸಿದಲ್ಲಿ ಆಗ ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಸಿಪಿ ಯೋಗೇಶ್ವರ್ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ದೆಹಲಿಯಲ್ಲಿ (Delhi) ಇಂದು ಪರೋಕ್ಷವಾಗಿ ಮಾತನಾಡಿದ ಡಿಕೆ ಶಿವಕುಮಾರ್ (Dk shivakumar) ಚುನಾವಣೆ ಸನಿಹವಾದ ನಂತರದಲ್ಲಿ ಯಾರು ಏನು ನಿರ್ಧಾರ ಮಾಡಲಿದ್ದಾರೆ ಕಾದು ನೋಡೋಣ ಬಿಜೆಪಿಯವರು ಈಡಿ ಐಟಿ ಬಳಸಿಕೊಂಡು ಪಕ್ಷ ಬಿಡುವವರನ್ನು ಕಟ್ಟಿ ಹಾಕುತ್ತಾರೆ ಎಂದು ಹೇಳುವ ಮೂಲಕ ಪರೋಕ್ಷ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ಕೊಟ್ಟಿದ್ದಾರೆ.