ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಬಳ್ಳಾರಿ ಜೈಲಿನಲ್ಲಿರೋ ಆರೋಪಿ ದರ್ಶನ್ (darshan) ವಿಚಾರವಾಗಿ, ಬಳ್ಳಾರಿಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (jameer ahmed khan) ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಅನಾವಶ್ಯಕವಾಗಿ ತಮ್ಮ ಹೆಸರನ್ನು ಎಳೆದು ತರಲಾಗ್ತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಆರೋಪಿ ದರ್ಶನ್ ವಿಚಾರದಲ್ಲಿ ಸುಮ್ಮನೆ ನನ್ನ ಹೆಸರು ಸೇರಿಸಿದ್ದಾರೆ. ನಾನು ದರ್ಶನ್ ಮೊದಲಿನಿಂದಲೂ ಆತ್ಮೀಯ ಸ್ನೇಹಿತರು ಎಂಬುದ್ರಲ್ಲಿ ಅನುಮಾನವಿಲ್ಲ. ಆದ್ರೆ ಈ ಪ್ರಕರಣದಲ್ಲಿ ನನ್ನ ಯಾವುದೇ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಜಮೀರ್, ಸುಮ್ಮನೆ ಯಾರಾದ್ರೂ ಜೈಲಿಗೆ ಹೋಗ್ತಾರಾ ? ಆದರೆ ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ ಎಂದು ಹೇಳುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ