ರಾಜ್ಯದಲ್ಲಿ ಬಿಜೆಪಿ (Bjp) ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಕೊಂಚ ಹೆಚ್ಚಾಗಿದ್ದು,ಈ ಗೊಂದಲಗಳನ್ನ ಬಗೆಹರಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (B L santosh) 2 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಆರ್ಎಸ್ಎಸ್ (RSS) ಸಂಘಟನೆಯ ಪ್ರಮುಖರು ಹಾಗೂ ಬಿಜೆಪಿ ಸಮನ್ವಯ ಸಮಿತಿಯ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಹಾಗೂ ಆರ್‌ಎಸ್‌ಎಸ್‌ನ ಪ್ರಮುಖರು ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಭಿನ್ನಾಭಿಪ್ರಾಯವಿರುವ ಹತ್ತಾರು ವಿಚಾರಗಳು ಚರ್ಚೆಗೆ ಬರಲಿವೆ. ಜೊತೆಗೆ ಮುಡಾ ಅಕ್ರಮ (MUDA scam), ವಾಲ್ಮೀಕಿ ನಿಗಮದ ಹಗರಣಗಳ ಪ್ರಸ್ತಾಪ ಹಾಗೂ ಬಿಜೆಪಿ-ಜೆಡಿಎಸ್ ನಡೆಸಿದ ಪಾದಯಾತ್ರೆಯ ಪ್ಲಸ್ ಮತ್ತು ಮೈನಸ್ ಸೇರಿದಂತೆ ಹಲವು ವಿಚಾರಗಳನ್ನ ಚರ್ಚೆ ಮಾಡಲಿದ್ದಾರೆ.