ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಪೈಶಾಚಿಕ ಕೃತ್ಯವನ್ನ ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ . ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (Indian medical association) ಕೊಟ್ಟಿರೋ ಹೋರಾಟದ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆಗಳ ಒಕ್ಕೂಟ,ವೈದ್ಯಕೀಯ ಅಸೋಸಿಯೇಶನ್‌ಗಳು ಬೆಂಬಲ ನೀಡಿವೆ.

ಶನಿವಾರ ಬೆಳಿಗ್ಗೆ ಆರು ಗಂಟೆಯಿಂದಲೇ ಓಪಿಡಿ (OPD) ಸೇವೆ ಬಂದ್ ಆಗಿದ್ದು, ನಾಳೆ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಸುಮಾರು 24 ಗಂಟೆಗಳ ಕಾಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತವಾಗಲಿದೆ.
ಇಂದು ಎಮರ್ಜನ್ಸಿ ಸೇವೆಯಷ್ಟೇ (Emergency serices) ಲಭ್ಯವಿರಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವ್ಯಾಪ್ತಿಯ 30 ಸಾವಿರ ವೈದ್ಯರು ಇಂದಿನ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ರಾಜ್ಯದ ಎಲ್ಲಾ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ.