• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕಕ್ಕೆ ಪಿಎಂ ಮೋದಿ ಕೊಡುಗೆ ಶೂನ್ಯ.. NDA ಗೆ ಬಹುಮತ ಬರಲ್ಲ : ಸಿಎಂ ಸಿದ್ದರಾಮಯ್ಯ ಭವಿಷ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅನಂತ್‌ಕುಮಾರ್ ಹೆಗಡೆ ವಿರುದ್ಧ ಕ್ರಮ ಆಗಲಿಲ್ಲ ಏಕೆ? – ಸಿಎಂ ಪ್ರಶ್ನೆ
Share on WhatsAppShare on FacebookShare on Telegram

ದಿ ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ:
ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಮೈಸೂರು, ಎಪ್ರಿಲ್ 13: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ
ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ ಎಂದರು. 400 ಕ್ಕೂ ಹೆಚ್ಚು ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದರು.

ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಉತ್ತರಿಸಲಿ
ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು.

ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

Tags: Congress Partyಬಿಜೆಪಿಸಿದ್ದರಾಮಯ್ಯ
Previous Post

ಅನಂತ್‌ಕುಮಾರ್ ಹೆಗಡೆ ವಿರುದ್ಧ ಕ್ರಮ ಆಗಲಿಲ್ಲ ಏಕೆ? – ಸಿಎಂ ಪ್ರಶ್ನೆ

Next Post

Official Who Molested Woman Didn’t Have to Be Politically Correct

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

Official Who Molested Woman Didn't Have to Be Politically Correct

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada