ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖನಿಜ ಭವನದಲ್ಲಿರುವ ಕೆಐಎಡಿಬಿ ಕಛೇರಿಯಲ್ಲಿ ಇಡಿ ಟೀಮ್ ಧಿಡೀರ್ ದಾಳಿ ನಡೆಸಿದೆ. ಕೆಐಎಡಿಬಿಯಲ್ಲಿ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ಇಡಿ ದಾಳಿ ನಡೆಸಲಾಗಿದೆ.ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿ, ಹಾಗೂ ಬೆಂಗಳೂರು ಮುಖ್ಯ ಕಚೇರಿ ಮೇಲೆ ಇಡಿ ದಾಳಿಯಾಗಿದೆ.
ಭೂ ಸ್ವಾಧೀನ ಹೆಸರಲ್ಲಿ ಅಧಿಕಾರಿಗಳು ನೂರಾರು ಕೋಟಿ ಲೂಟಿ ಹೊಡೆದಿರುವ ಆರೋಪ ಕೇಳಿಬರುತ್ತಿದೆ.ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣ ಲೂಟಿ ಮಾಡಿರುವ ಆರೋಪ ಇದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹೆಸರಲ್ಲಿ ಅಕ್ರಮ ನಡೆದಿದ್ದು, ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಲೂಟಿ ಮಾಡಲಾಗಿದೆ ಎನ್ನಲಾಗಿದೆ.
ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್ ಮಾಡಿ ಹಣ ಈ ರೀತಿ ಲೂಟಿ ಮಾಡಿರುವ ಆರೋಪ ಇದಾಗಿದ್ದು,IDBI ಬ್ಯಾಂಕ್ ಒಂದೇ ಶಾಖೆಯಲ್ಲಿ 24 ಖಾತೆಗಳನ್ನು ಓಪನ್ ಹಣ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ.