
ಕುಮಾರಸ್ವಾಮಿ ಒಬ್ಬ ದಾರಿ ತಪ್ಪಿದ ಮಗ.
ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.
ಹೆಚ್ಡಿಕೆ ವಿರುದ್ಧ ಖ್ಯಾತ ಚಿತ್ರನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ರು. ಭಾನುವಾರ ಮಂಡ್ಯದ ರೈತ ಸಭಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಹೇಳಿಕೆ ನೀಡಿದ್ರು.ಶ್ರಮಿಕನಗರ ನಿವಾಸಿಗಳ ಒಕ್ಕೂಟದ ವತಿಯಿಂದ ನಡೆದ ಸ್ವಾಭಿಮಾನಿ ಗೆಲುವಿನ ಸಮಾವೇಶ ಆಯೋಜನೆ ಮಾಡಲಾಗಿತ್ತು
ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ ?ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದಕ್ಕೆ.ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು.
ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ.ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳ ನನ್ನ ಮಗ ಯಾರು ಎಂದು ಮಂಡ್ಯದ ಜನತೆ ನಿರ್ಧರಿಸುತ್ತಾರೆ.ಲೋಕಸಭಾ ಚುನಾವಣೆ ಬಂದಿರುವುದರಿಂದ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ. ಇದರಿಂದಾಗಿ ಮಹಾಪ್ರಭುವಿನ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಸ್ಸುಗಳು ಹೊರಟಿವೆ. ಇದರಿಂದ ಬೆಂಗಳೂರು-ಮೈಸೂರು ಹೈವೇ ನಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಅಂತ ಹೇಳಿದ್ರು.

ಕಳೆದ ಸೆಪ್ಟಂಬರ್ ನಲ್ಲಿ ಬರ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.
ಆದರೆ ಏಪ್ರಿಲ್ ಬಂದರೂ ಬರ ಪರಿಹಾರ ನೀಡಲಿಲ್ಲ.
ಇದರಿಂದ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಹೋಗಿದೆ.ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ನೋಟೀಸ್ ನೀಡಲು ಮುಂದಾದಾಗ.
ನೋಟೀಸ್ ನೀಡಬೇಡಿ ಮಾನ ಮರ್ಯಾದೆ ಹೋಗುತ್ತೇ ಎಂದು ಬೇಡಿಕೊಳ್ಳುತ್ತಿದ್ದಾರೆ.ಇಷ್ಟೆಲ್ಲ ನಾಟಕ ಯಾಕೆ ? ಎಂದು ಛೇಡಿಸಿದರು