
ಹಾವೇರಿ: ಲೋಕಸಭೆ ಚುನಾವಣೆ ನಂತರ ರಾಜ್ಯದ ಕಾಂಗ್ರೆಸ್ ಸರಕಾರ ಧೂಳಿಪಟವಾಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ. ವಿಶ್ವಾಸ ವ್ಯಕ್ರಪಡಿಸಿದರು.
ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
ಇದು ದೇಶದ ಭವಿಷ್ಯ ರೂಪಿಸುವ ಲೋಕಸಭೆಗೆ ನಡೆಯುವ ಚುನಾವಣೆ. ಈಗ ನಡೆಯುತ್ತಿರುವ ಚಿನಾವಣೆ ಎರಡು ಪಕ್ಷ, ಎರಡು ಜಾತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ. ದೇಶಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ರಾಜ್ಯದಲ್ಲಿಯೂ ಬಿಜೆಪಿ ಪರ ಅಲೆಯಿಂದ ಇದರಿಂದ ಸಿಎಂ ಡಿಸಿಎಂ ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟವಾಗಲಿದೆ ಎಂದು ಹೇಳಿದರು.
2014 ರ ಮುಂಚೆ ಯುಪಿಎ ಸರ್ಕಾರದ ಅವಧಿಯಲ್ಲಿ ಈ ದೇಶದ ಜನರು ಈ ದೇಶಕ್ಕೆ ಭವಿಷ್ಯ ಇಲ್ಲ ಎಂದು ಆಶಾಭಾವನೆ ಕಳೆದುಕೊಂಡಿದ್ದರು. ಆದರೆ, 2014 ರಲ್ಲಿ ಮೋದಿಯವರು ಬಂದ ನಂತರ ಭಾರತಕ್ಕೂ ಭವಿಷ್ಯ ಇದೆ. ಈ ದೇಶವನ್ನು ಭ್ರಷ್ಟಾಚಾರ ಮುಕ್ತವಾಗಿ ಅಭಿವೃದ್ದಿ ಮಾಡಬಹುದು ಎಂದು ತೋರಿಸಿಕೊಟ್ಡಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ನರೇಂದ್ರ ಮೋದಿಯವರು ಭ್ತಷ್ಟಾಚಾರ ರಹಿತ ಆಡಳಿತ ನೀಡಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ
ಸಚಿವರಾದ ಬಿ.ಸಿ ಪಾಟೀಲ್, ಮನೋಹರ್ ತಹಸೀಲ್ದಾರ್, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಇದಕ್ಕೂ ಮೊದಲು ಸುಮಾರು ಎರಡು ಕಿಲೋ ಮೀಟರ್ ಗುದ್ಲೆಪ್ಪ ಹಳ್ಳಿಕೇರಿ ಸರ್ಕಲ್ ನಿಂದ್ ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ವರೆಗೆ ಬೃಹತ್ ರೋಡ್ ಶೋ ನಡೆಸಲಾಯಿತು.











