ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತರ ವಿರುದ್ಧ ಬಿಜೆಪಿ ಶಾಸಕ ಶ್ರೀವತ್ಸ (8jp mla sri vatsa) ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ. ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಲ್ಯಾಂಡ್ ಅಕ್ವಾಜೇಶನ್ ಅಧಿಕಾರಿಗಳು ಸೇರಿದಂತೆ ಸರ್ಕಾರದ ಕಾರ್ಯದರ್ಶಿಗಳು, ಅರ್ಬನ್ಡೆವಲಪ್ಟೆಂಟ್, ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುಡಾ ಹಗರಣದಲ್ಲಿ ಸಾಕಷ್ಟು ಅಕ್ರಮ ಆಗಿದೆ.ಆ ಅಕ್ರಮಗಳಲ್ಲಿ ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಇಬ್ಬರೂ ಭಾಗಿಯಾಗಿದ್ದಾರೆ ಎಮದು ಆರೋಪಿಸಿದ್ದಾರೆ.
ಈ ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಬಂಧಿಸುವಂತೆ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ಮನವಿ ಮಾಡಿದ್ದಾರೆ.





