ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್ ಬಾಂಬ್
“ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಫೋನ್ ಕದ್ದಾಲಿಕೆ ಇದು ಗೊತ್ತಿರುವ ವಿಚಾರವೇ. ಈ ಬಗ್ಗೆ ಮಾತನಾಡಲು ನೋವಾಗುತ್ತದೆ. ಈ ವಿಚಾರವಾಗಿ ಎಲ್ಲಾ ದಾಖಲೆಗಳು ಇವೆ. ಆದರೂ ಈ ವಿಚಾರವನ್ನು ಈಗ ಮಾತನಾಡುವುದು ಸೂಕ್ತವಲ್ಲ, ಮುಂದೆ ಮಾತನಾಡುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.

ಆರೋಪಿಸಿದ್ದ ಚಲುವರಾಯಸ್ವಾಮಿ..!
ಗುರುವಾರ ಮಂಡ್ಯದಲ್ಲಿ ಮಾತಾಡಿದ್ದ ಸಚಿವ ಚೆಲುವರಾಯಸ್ವಾಮಿ, ಜೆಡಿಎಸ್ ಸರ್ಕಾರ ಇದ್ದಾಗ ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಟ್ಯಾಪಿಂಗ್ ಆಗಿತ್ತು. ಖುದ್ದು ಕುಮಾರಸ್ವಾಮಿ ನೇತೃತ್ವದಲ್ಲಿ ಎಲ್ಲವೂ ನಡೆದಿತ್ತು ಅಂತ ಆರೋಪಿಸಿದ್ರು.ಸದ್ಯ ಕರುನಾಡ ರಾಜಕೀಯ್ ವಲಯದಲ್ಲಿ ಈ ವಿಚಾರ ಸಾಕಷ್ಟು ಚರ್ಚೆ ಆಗ್ತಿದೆ.