ಚನ್ನಪಟ್ಟಣ ಉಪ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಆಗಿಲ್ಲ. ಆದಾಗಲೇ ಕ್ಷೇತ್ರದಲ್ಲಿ ದಿನದಿಂದಿನಕ್ಕೆ ಅಖಾಡ ರಂಗೇರುತ್ತಿದೆ. ಮೊನ್ನೆಯಷ್ಟೇ ಬಿಜೆಪಿಯ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ನಾನು ಕೂಡ ಟಿಕೆಟ್ ಆಕಾಂಕ್ಷಿ, ಎನ್‌ಡಿಎ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆಗೂ ಸಿದ್ಧ ಎಂದು ಹೇಳಿದ್ರು.

ಇದೀಗ ಸಿ.ಪಿ.ಯೋಗೇಶ್ವರ್ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಡಿಕೆಶಿ ಮತ್ತು ಸಿಪಿವೈ ವೇದಿಕೆಯಲ್ಲಿ ಅಕ್ಕ-ಪಕ್ಕಾ ಕುಳಿತಿದ್ದಾರೆ. ಡಿಕೆಶಿ ಜೊತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಯೋಗೇಶ್ವರ್ ಮೂಡಿಸಿದ್ದಾರೆ.
ಆ ಮೂಲಕ ಒಂದುವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೇಯಿದ್ದಲ್ಲಿ, ಪಕ್ಷ ತೊರೆದು ಕಾಂಗ್ರೆಸ್ ಸೇರುವ ಸಂದೇಶವನ್ನ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಮುಂದಾಗಿದ್ದಾರೆ. ಆದ್ರೆ ಬಿಜೆಪಿ ಹೈಕಮಾಂಡ್ ಈಗಾಗಲೇ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.