ಉನ್ನತವಾದ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು (Governer) ರಾಜಕೀಯ ದ್ವೇಷದಿಂದ ರಾಜಭವನವನ್ನ ದುರುಪಯೋಗ ಪಡಿಸಿಕೊಳ್ತಿದ್ದಾರೆ. ಈ ಮೂಲಕ ಹುದ್ದೆಗೆ ಕಳಂಕ ತರುತ್ತಿದ್ದಾರೆ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ (BK Hariprasad) ಕೆಂಡಾಮಂಡಲ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ (Tweet)ನಲ್ಲಿ ಕಿಡಿಕಾರಿರುವ ಹರಿಪ್ರಸಾದ್, ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramiah) ಅವರ ವಿರುದ್ಧ ಬಿಜೆಪಿ (BJP) ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಂಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಸಿಎಂ ವಿರುದ್ಧ ರಾಜ್ಯಪಾಲರು ಪ್ರೊಸೆಕ್ಯುಷನ್ ಗೆ (Prosecution) ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಟ್ವೀಟ್ ನಲ್ಲಿ ಹರಿಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷ ಇದರ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟ ಮುಂದುವರೆಸುತ್ತದೆ ಅಂದಿದ್ದಾರೆ.