
ಸ್ಯಾಂಡಲ್ ವುಡ್ ಗೆ ಭಾನುವಾರ ದೊಡ್ಡ ಶಾಕ್ ಎದುರಾಗಿದೆ. ಖ್ಯಾತ ನಿರ್ಮಾಪಕ ಹಾಗೂ ಬಿಲ್ಡರ್ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಈ ಸಾವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಬೆಳಿಗ್ಗೆ 10 ಗಂಟೆಗೆ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಕುಟುಂಬಸ್ಥರು ಸುಗಣ ಆಸ್ಪತ್ರೆಗೆ ದಾಖಲು ಮಾಡಲು ಮುಂದಾದರು. ಆದರೆ ಆಸ್ಪತ್ರೆಗೆ ತರುವಷ್ಟರಲ್ಲೇ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದರು ಎನ್ನಲಾಗಿದೆ.

ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್ ಕೂಡ ಆಗಿರುವ ಸೌಂದರ್ಯ ಜಗದೀಶ್ , ಮಸ್ತ್ ಮಜಾ ಮಾಡಿ, ಅಪ್ಪು ಪಪ್ಪು, ರಾಮ್ಲೀಲಾ, ಸ್ನೇಹಿತರು ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಹಲವು ಸಿನಿಮಾ ಗಳನ್ನ ವಿತರಣೆ ಕೂಡ ಮಾಡಿದ್ದಾರೆ. ಇತ್ತೀಚೆಗೆ ಅವರ ಮಗಳ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಿದ್ದರು.ಬೆಂಗಳೂರಿನ ಜೆಟ್ಲಾಗ್ ನಲ್ಲಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಪ್ರಕರಣ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಸೌಂದರ್ಯ ಜಗದೀಶ್ ಈ ಪಬ್ ನ ಮಾಲೀಕರಾಗಿದ್ದಾರೆ.