ಬಾಂಗ್ಲಾದೇಶದಲ್ಲಿ (Bangladesh) ಮೀಸಲಾತಿಯ ಕಿಚ್ಚು ಧಗಧಗಿಸುತ್ತಿದೆ. ಶಾಂತಿಯುತವಾಗಿ ಶುರುವಾದ ಹೋರಾಟವೀಗ ಉಗ್ರರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ದೇಶವೇ ಹೊತ್ತಿ ಉರಿಯುತ್ತಿದ್ದು, ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ತಲೆದೋರಿದೆ. ಶೇಖ್ ಹಸೀನಾ (Sheik haseena) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಷ್ಟೇ ಅಲ್ಲ ಜೀವ ಭಯದಿಂದ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದಾರೆ. ಹಿಂಡನ್ ವಾಯುನೆಲೆಗೆ ಬಂದಿಳಿದ ಶೇಖ್ ಹಸೀನಾ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit dowel) ಭೇಟಿಯಾದ್ರು.. ಬಳಿಕ ಅವರನ್ನು ಸುರಕ್ಷಿತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಭಾರತದಿಂದ (India) ಅವರು ಲಂಡನ್ (london) ಪ್ರಯಾಣ ಬೆಳಸುವ ಸಾಧ್ಯತೆ ಇದೆ.
ಬಾಂಗ್ಲಾದೇಶದ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ (PM narendra modi) ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮೋದಿ ಸಚಿವರೊಂದಿಗೆ ಚರ್ಚಿಸಿದ್ದಾರೆ. ಹಾಗೂ ಬಾಂಗ್ಲಾದಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದಾರೆ.