ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh nirani) ಮತ್ತು ಸಚಿವ ಎಂ.ಬಿ. ಪಾಟೀಲ್ (M B patil) ನಡುವಿನ ವಾಕ್ಸಮರ ತಾರರಕ್ಕೇರಿದೆ. ಈ ಬಗ್ಗೆ ಕೈಗಾರಿಕ ಸಚಿವ ಎಂ.ಬಿ.ಪಾಟೀಲ್ ಟ್ವಿಟ್ ಮಾಡಿದ್ದು, ಮುರುಗೇಶ್ ನಿರಾಣಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಸಿದ್ದಾರ್ಥ ಟ್ರಸ್ಟ್ ಗೆ (Siddartha trust) ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ (mallikarjuna kharge) ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ (bjp) ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.
ಆದರೆ, ದನಕಾಯುವವನು ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ಮಿ. ನಿರಾಣಿ ತಾನಾಗಿಯೇ ದನಕಾಯುವವ ಎಂದು ತಿಳಿದುಕೊಂಡು, ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ (vijayapura) ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ