ಲೈಂಗಿಕ ಹಿಂಸೆ ಸಮಸ್ಯೆಗಳು ಸೇರಿದಂತೆ ಕನ್ನಡ ಚಲನತ್ರೋತ್ಸವದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಫೈರ್ ಸಂಸ್ಥೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.
ನ್ಯಾ.ಹೇಮಾ ಸಮಿತಿಯ ವರದಿಯು ಮಲಯಾಳಂ ಇತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರೆ ಸಮಸ್ಯೆಗಳನ್ನು ಬಹಿರಂಗ ಪಡಿಸಿದ ನಂತರ ಕರನಾಟಕ ಸರ್ಕಾರವು ಕನ್ನಡ ಚಲನ ಚಿತ್ರೋದ್ಯಮದಲ್ಲಿನ ಈ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಈ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಫೈರ್ ಸಂಸ್ಥೆ ಆಗ್ರಹಿಸಿದೆ.
ಮಲಯಾಳಂ ಚಲನಚಿತ್ರ ರಂಗದಲ್ಲಿ ಇಮಥ ಸಾಕಷ್ಟು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆ ಪೈಕಿ ನಿವಿನ್ ಪೌಲಿ ಮೇಲೆ ಕೂಡ ರೇಪ್ ಕೇಸ್ ದಾಖಲಾಗಿದೆ. ಇದು ಮಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದ್ದು, ನ್ಯಾಂಡಲ್‌ವುಡ್‌ನಲ್ಲೂ ಮಹಿಳೆಯರ ಸುರಕ್ಷತೆ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಈ ಸಂಸ್ಥೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದೆ.