ಹಳೇ ಹುಬ್ಬಳ್ಳಿಯ ಗಲಭೆಗೆ ಸಂಬಂಧಿಸಿದಂತೆ ಗಲಭೆಯ ಮಾಸ್ಟರ್ ಮೈಂಡ್ ಮೌಲ್ವಿ ವಾಸಿಂ ಪಠಾಣ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ ವಾಸಿಂ ನಾನು ಈ ಘಟನೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ. ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಕುರಿತು ದೂರು ನೀಡಲು ಹಲವಾರು ಯುವಕರು ಅಲ್ಲಿ ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ನನ್ನನ್ನು ಕರೆಸಿದ್ದರು. ಪೊಲೀಸರ ಜೊತೆಗೆ ಮಾತನಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ. ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಶಾಂತಿ ಕಾಪಾಡಲು ಹೇಳಿದೆ. ಆದರೆ ನಾನೇ ಮುಖ್ಯ ಸೂತ್ಧಾರ ಎಂದು ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.