
ಪ್ರೀತಿ ನಿರಾಕರಿಸಿದ್ದಕ್ಕೆ ಸಾಯಿಸಿದ್ದು, ಲವ್ ಜಿಹಾದ್ ಅಲ್ಲ – ಪರಂ
ಹುಬ್ಬಳ್ಳಿಯಲ್ಲಿ ನಡೆದಿರುವ ನೇಹಾ ಹತ್ಯೆ ಲವ್ ಜಿಹಾದ್ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ಎರಡು ಧರ್ಮಗಳ ನಡುವೆ ನಡೆದಿರುವ ಘಟನೆ. ನೇಹಾ ಮೊದಲಿನಿಂದಲೂ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಅವರ ಮನೆಯವರಿಗೆ ತಿಳಿದಿದೆ. ಮನೆಯಲ್ಲಿ ಆಕೆಗೆ ಬುದ್ಧಿ ಹೇಳಿ ಇದನ್ನು ಇಲ್ಲಿಗೆ ಮುಕ್ತಾಯಗೊಳಿಸುವಂತೆ ತಿಳಿಸಿದ್ದಾರೆ.

ನೇಹಾ ಕೂಡ ಮನೆಯಲ್ಲಿ ಹೇಗೆ ಹೇಳಿದ್ದಾರೋ ಹಾಗೆಯೇ ಒಪ್ಪಿಕೊಂಡು ನಡೆದುಕೊಳ್ಳಲು ಆರಂಭಿಸಿದ್ದಾಳೆ. ಆದ್ರೆ, ಈ ವಿಚಾರವನ್ನು ಸಹಿಸಿಕೊಳ್ಳಲಾಗದ ಹುಡುಗ, ನಿನ್ನೆ ಆಕೆಗೆ ಚಾಕುವಿನಿಂದ ಏಳೆಂಟು ಬಾರಿ ಇರಿದು ಹತ್ಯೆ ಮಾಡಿದ್ದಾನೆ. ಇದು ಲವ್ ಜಿಹಾದ್ ಅಲ್ಲ. ಚುನಾವಣಾ ಹೊಸ್ತಿಲಿನಲ್ಲಿ ಇದಕ್ಕೆ ಈ ಪ್ರಕರಣಕ್ಕೆ ರಾಜಕೀಯ ಬಣ್ಣ ನೀಡಲಾಗುತ್ತಿದೆ. ಇದು ಸರಿಯಲ್ಲ. ನಾನು ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಮಾತುಕತೆ ನಡೆಸಿದ್ದೇನೆ ಎಂದು ಬೆಂಗಳೂರಿನಲ್ಲಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆ ಯುವಕನನ್ನು ಕೂಡ ಬಂಧಿಸಿರುವುದಾಗಿ ತಿಳಿಸಿದ್ದಾರೆ.