
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ಪ್ರಶ್ನಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅಕ್ಟೋಬರ್ 10, 2024ರಲ್ಲಿ ನಡೆದಿದ್ದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಿದ್ದು, ಕೋರ್ಟ್ನಲ್ಲಿ ಕೇಸ್ ಹಿಂಪಡೆಯಲು ಅರ್ಜಿ ಹಾಕುವ ನಿರ್ಧಾರ ಮಾಡಲಾಗಿತ್ತು. ಆ ಬಳಿಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿ, ಕೇಸ್ ಹಿಂಪಡೆಯುವ ಪ್ರಕ್ರಿಯೆ ಶುರು ಮಾಡಿತ್ತು. ಇದೀಗ ಈ ನಿರ್ಧಾರ ಪ್ರಶ್ನೆ ಮಾಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.

ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಮಾಡಿರುವ ಬಗ್ಗೆ ವಕೀಲರು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಪಿಐಎಲ್ ಹಾಕಿಸಿದ್ದೇವೆ ಎಂದಿದ್ದಾರೆ ಹಿರಿಯ ವಕೀಲ ಸಂಜೀವ್ ಬಡಸ್ಕರ್. ಯುವ ವಕೀಲ ಗಿರೀಶ್ ಭಾರದ್ವಾಜ್ ಕಡೆಯಿಂದ ಪಿಐಎಲ್ ಹಾಕಿದ್ದೇವೆ . ಅಗತ್ಯ ದಾಖಲೆಗಳನ್ನು ನಾವು ಕೊಟ್ಟಿದ್ದೇವೆ. ದೊಂಭಿ ಗಲಭೆಯಂತಹ ಪ್ರಕರಣ ವಾಪಸ್ ಪಡೆಯಲು ಬರಲ್ಲ. ಆದರೆ ರಾಜ್ಯ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಪುರಸ್ಕರಿಸೋ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಇದರೊಂದಿಗೆ ನಮಗೆ ಮೊದಲ ಯಶಸ್ಸು ಸಿಕ್ಕಿದೆ.
ರಾಜ್ಯ ಸರ್ಕಾರ ಮಾನದಂಡಗಳನ್ನು ಗಾಳಿಗೆ ತೂರಿದೆ. ಗಂಭೀರ ಪ್ರಕರಣವನ್ನು ವಾಪಸ್ ಪಡೆದಿದೆ. ಮಾರ್ಚ್ 17ಕ್ಕೆ ಪ್ರಕರಣ ವಿಚಾರಣೆಗೆ ಬರಲಿದೆ. ಸಚಿವ ಸಂಪುಟ ತೆಗೆದುಕೊಂಡು ನಿರ್ಣಯಕ್ಕೆ ತಡೆಯಾಜ್ಞೆ ಸಿಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಸಂಜೀವ್ ಬಡಸ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2022 ರ ಏಪ್ರಿಲ್ 16ರಂದು ರಾತ್ರಿ ಮುಸ್ಲಿಂ ಸಮುದಾಯದ ಸಾವಿರಾರು ಜನರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದಾರೆ ಎಂದು ಆರೋಪಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ನಾಲ್ವರು ಪೊಲೀಸರಿಗೆ ಗಾಯಗಳಾಗಿದ್ದವು. ಆದರೆ ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ಹಳೆ ಹುಬ್ಬಳ್ಳಿ ಪ್ರಕರಣ ವಾಪಸ್ ಪಡೆಯಲು ಪ್ರಕ್ರಿಯೆ ಆರಂಭ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನೆ ಮಾಡಲಾಗಿದೆ. ಹೈಕೋರ್ಟ್ನಲ್ಲಿ ಸರ್ಕಾರಕ್ಕೆ ಮುಖಭಂಗ ಆಗುತ್ತಾ ಅನ್ನೋ ಚರ್ಚೆ ನಡೆಯುತ್ತಿದೆ..
