• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story
0
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ
Share on WhatsAppShare on FacebookShare on Telegram

Central Board of Secondary Education (ಸಿಬಿಎಸ್‌ಇ) ಪರಿಚಯಿಸಿರುವ ಹೊಸ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳು ತಪ್ಪಾಗಿ ಅಪ್‌ಲೋಡ್ ಆಗಿರುವುದು, ಮಸುಕಾದ ಪ್ರತಿಗಳು, ಉತ್ತರಗಳ ಪರಿಶೀಲನೆ ಆಗದಿರುವುದು ಹಾಗೂ ಪೋರ್ಟಲ್ ತಾಂತ್ರಿಕ ದೋಷಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೀಡಾಗಿದ್ದಾರೆ.

ADVERTISEMENT
YouTube player

ವಿಶೇಷವಾಗಿ ಕ್ಲಾಸ್‌ 12 ವಿದ್ಯಾರ್ಥಿ ವೇದಾಂತ್ ಶ್ರೀವಾಸ್ತವ ಎಂಬಾತ ತನ್ನ ಫಿಸಿಕ್ಸ್ ಉತ್ತರ ಪತ್ರಿಕೆ ತನ್ನದೇ ಅಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ ಬಳಿಕ ಈ ವಿವಾದ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಉತ್ತರ ಪತ್ರಿಕೆಯಲ್ಲಿ ಕಾಣಿಸಿದ ಕೈಬರಹ, ಉತ್ತರ ಶೈಲಿ ಹಾಗೂ ಬರವಣಿಗೆ ತನ್ನದ್ದೇ ಅಲ್ಲ ಎಂದು ವಿದ್ಯಾರ್ಥಿ ಹೇಳಿಕೊಂಡಿದ್ದಾನೆ. ಕುಟುಂಬದವರು ಹಾಗೂ ಶಿಕ್ಷಕರೂ ಕೂಡ ಹೋಲಿಕೆ ನಡೆಸಿ ಇದು ಬೇರೆ ವಿದ್ಯಾರ್ಥಿಯ ಉತ್ತರ ಪತ್ರಿಕೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Karnataka Power Tussle : ನಾಯಕತ್ವ ಬದಲಾವಣೆ ಇಲ್ಲ, ಆದ್ರೆ ಟ್ವಿಸ್ಟ್ ಇದೆ..!  #dkshivakumar #siddaramaiah

ಈ ಪ್ರಕರಣ ವೈರಲ್ ಆದ ಬಳಿಕ ಸಿಬಿಎಸ್‌ಇ ತಪ್ಪು ಉತ್ತರ ಪತ್ರಿಕೆ ಅಪ್‌ಲೋಡ್ ಆಗಿರುವುದನ್ನು ಒಪ್ಪಿಕೊಂಡು ನಂತರ ಸರಿಯಾದ ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗೆ ಒದಗಿಸಿದೆ ಎಂದು ವರದಿಯಾಗಿದೆ. ಆದರೆ ಈ ಘಟನೆ ಸಿಬಿಎಸ್‌ಇಯ ಆನ್‌ಸ್ಕ್ರೀನ್ ಮಾರ್ಕಿಂಗ್ (OSM) ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆ ಎಬ್ಬಿಸಿದೆ. ಇದರ ಜೊತೆಗೆ ಸಾವಿರಾರು ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳು ಮಸುಕಾಗಿವೆ, ಕೆಲವು ಪುಟಗಳು ಕಾಣಿಸುತ್ತಿಲ್ಲ, ಹಲವು ಉತ್ತರಗಳಿಗೆ ಮೌಲ್ಯಮಾಪನವೇ ಆಗಿಲ್ಲ ಎಂದು ದೂರಿದ್ದಾರೆ. ಕೆಲವು ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಉತ್ತರ ಬರೆದಿದ್ದರೂ “N.A.” ಎಂದು ಗುರುತಿಸಲಾಗಿದೆ ಎಂದು ಆರೋಪಿಸಿದ್ದಾರೆ.

Karnataka CM Change Climax : ಡಿಕೆಶಿ ಪ್ಲ್ಯಾನ್‌ ಏನ್‌ ಗೊತ್ತಾ.? #pratidhvani #dkshivakumar #siddaramaiah

ಪುನರ್ಮೌಲ್ಯಮಾಪನ ಪ್ರಕ್ರಿಯೆಯಲ್ಲೂ ಗೊಂದಲ ಉಂಟಾಗಿದ್ದು, ಉತ್ತರ ಪತ್ರಿಕೆಗಳ ಪ್ರತಿಗಾಗಿ ₹100 ಬದಲು ಸಾವಿರಾರು ರೂಪಾಯಿ ಶುಲ್ಕ ತೋರಿದ ಘಟನೆಗಳೂ ವರದಿಯಾಗಿವೆ. ಕೆಲ ವಿದ್ಯಾರ್ಥಿಗಳಿಗೆ ₹69,000ರವರೆಗೆ ಶುಲ್ಕ ತೋರಿದ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಬಳಿಕ ತಾಂತ್ರಿಕ ದೋಷದಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸಿಬಿಎಸ್‌ಇ ಸ್ಪಷ್ಟನೆ ನೀಡಿದೆ.

Karnataka CM Change Climax : ಡಿಕೆಶಿ ಪ್ಲ್ಯಾನ್‌ ಏನ್‌ ಗೊತ್ತಾ.? #pratidhvani #dkshivakumar #siddaramaiah

ಪೋರ್ಟಲ್ ಪದೇ ಪದೇ ಕ್ರ್ಯಾಶ್ ಆಗುವುದು, ಪಾವತಿ ವಿಫಲವಾಗುವುದು ಹಾಗೂ ಉತ್ತರ ಪತ್ರಿಕೆ ಡೌನ್‌ಲೋಡ್ ಆಗದಿರುವುದರಿಂದ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವೂ ಸಿಬಿಎಸ್‌ಇಯಿಂದ ವರದಿ ಕೇಳಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮಧ್ಯೆ, ಸಿಬಿಎಸ್‌ಇ ವ್ಯವಸ್ಥೆಯಲ್ಲಿ ಭದ್ರತಾ ದೋಷಗಳಿವೆ ಹಾಗೂ ಅಂಕಗಳನ್ನು ತಿದ್ದುಪಡಿ ಮಾಡುವ ಸಾಧ್ಯತೆ ಇದೆ ಎಂಬ ಆರೋಪಗಳೂ ಕೇಳಿಬಂದಿವೆ. ಆದರೆ ಈ ಆರೋಪಗಳನ್ನು ಸಿಬಿಎಸ್‌ಇ ತಳ್ಳಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ “ಹ್ಯಾಕ್” ವರದಿಗಳು ಕೇವಲ ಟೆಸ್ಟ್ ಪೋರ್ಟಲ್‌ಗೆ ಸಂಬಂಧಿಸಿದವು ಎಂದು ಸ್ಪಷ್ಟಪಡಿಸಿದೆ.

ವಿದ್ಯಾರ್ಥಿಗಳ ಭವಿಷ್ಯಕ್ಕೆ ನೇರವಾಗಿ ಸಂಬಂಧಿಸಿದ ಬೋರ್ಡ್ ಪರೀಕ್ಷಾ ಮೌಲ್ಯಮಾಪನದಲ್ಲಿ ಇಂತಹ ತಾಂತ್ರಿಕ ದೋಷಗಳು ಗಂಭೀರ ಚರ್ಚೆಗೆ ಕಾರಣವಾಗಿದ್ದು, ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಒತ್ತಾಯಗಳು ಕೇಳಿಬರುತ್ತಿವೆ.

Tags: #AnswerSheet#BoardExams#CBSEBoard#CBSEExam#DigitalAssessment#DigitalEvaluation#EducationSystem#ExamEvaluation#StudentOutrage#StudentProtestCBSEcbseresultsEducationNewsIndiaEducationpratidavani
Previous Post

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

Next Post

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!