ಕರ್ನಾಟಕದ ವಿಧಾನಸಭಾ ಚುನಾವಣೆಗೆ ಇನ್ನು ಆರೇಳು ತಿಂಗಳು ಇರುವಂತೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಗದ್ದಲು ಶುರುವಾಗಿದೆ. ಈ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ನನಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬೆಂಗಳೂರಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಆ ಆಸೆ ಇದೆ. ನಮ್ಮ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ. ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯವೂ ದೊಡ್ಡದಿದೆ. ಎಲ್ಲ ಸಮುದಾಯದವರು ಸೇರಿ ಮತ ಕೊಟ್ಟರೆ ಸಿಎಂ ಆಗಬಹುದು ಎಂದು ಸಿಎಂ ಅಕಾಂಕ್ಷಿಯಲ್ಲಿ ನಾನು ಇದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ.
ಆದರೆ ರಾಜ್ಯದ ಜನರು ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಗಬೇಕೆಂದು ಬಯಸುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಅನ್ನೋದು ನನ್ನ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ