• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ.

ಪ್ರತಿಧ್ವನಿ by ಪ್ರತಿಧ್ವನಿ
March 19, 2024
in ಇದೀಗ, ಕರ್ನಾಟಕ, ದೇಶ, ವಿದೇಶ
0
ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ.
Share on WhatsAppShare on FacebookShare on Telegram

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? – ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ.

ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ.
ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ?

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ?

ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು?

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ?

Tags: Basavaraj BommaiBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ನಗರ್ತ್ ಪೇಟೆಯಲ್ಲಿ ಹನುಮಾ ಚಾಲೀಸಾ ಕೇಸ್.. ಅಂಗಡಿ ಮಾಲೀಕ ಖಾಕಿ ವಶಕ್ಕೆ..

Next Post

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada