• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

“ಮ್ಯಾಕ್ಸ್” ಚಿತ್ರತಂಡದಿಂದ ಆಯೋಜಿಸಲಾಗಿದ್ದ “ಥ್ಯಾಂಕ್ಸ್ ಗಿವಿಂಗ್” ಸಮಾರಂಭದಲ್ಲಿ ಕಿಚ್ಚ ಸುದೀಪ್ ಹೇಳಿಕೆ .

ADVERTISEMENT

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ನಾಯಕರಾಗಿ ನಟಿಸಿರುವ “ಮ್ಯಾಕ್ಸ್” ಚಿತ್ರ ಡಿಸೆಂಬರ್ 25ರಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತೋಷವನ್ನು ಸಂಭ್ರಮಿಸಲು ಥ್ಯಾಂಕ್ಸ್ ಗಿವಿಂಗ್ ಸಮಾರಂಭ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ಎರಡೂವರೆ ವರ್ಷದ ಬಳಿಕ ನನ್ನ ಚಿತ್ರ ಬಿಡುಗಡೆಯಾಗಿದೆ. ಮ್ಯಾಕ್ಸ್ ಚಿತ್ರ ಯಶಸ್ಸು ಕಂಡಿದೆ. ಅಭಿಮಾನಿಗಳ ಹಾಗೂ ಚಿತ್ರತಂಡದವರ ಮುಖದಲ್ಲಿ ಗೆಲುವಿನ ನಗು ಮೂಡಿದೆ. ಆ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ. ನಾನು ಸದ್ಯ ಈ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದೇನೆ. ಪ್ರೀಕ್ವೆಲ್, ಸೀಕ್ವೆಲ್ ಯಾವುದರ ಬಗ್ಗೆ ಸದ್ಯಕ್ಕೆ ಗಮನ ಹರಿಸಿಲ್ಲ.ನಿರ್ದೇಶಕ ರಾಜಮೌಳಿ ಅವರು ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ಅದು ಇನ್ನಷ್ಟು ಖುಷಿಯ ಸಂಗತಿ. ತಮಿಳಿನಲ್ಲಿ ಅದ್ಬುತ ಪ್ರದರ್ಶನ ಕಾಣುತ್ತಿದೆ. ನಿರ್ಮಾಪಕರು,ನಿರ್ದೇಶಕರು ಅಲ್ಲಿಯವರೆ ಆಗಿರುವುದರಿಂದ ಅವರ ಮುಖದಲ್ಲಿ ಖುಷಿ ಕಾಣುತ್ತಿದೆ. ನಟನಾಗಿ ನನಗೂ ಹೆಮ್ಮೆ ಇದೆ. ತಮಿಳಿನಲ್ಲಿ ಕಲಾವಿದರು ಚಿತ್ರ ನೋಡುತ್ತಿದ್ದಾರೆ‌.
‘ಮ್ಯಾಕ್ಸ್’ ಚಿತ್ರದ ಯಶಸ್ಸಿನ ನಂತರ ನನ್ನ ಸ್ನೇಹಿತರ ಬಳಗ ಇನ್ನಷ್ಟು ಹೆಚ್ಚಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬಳಸಲಾಗಿದ್ದ ಕಾಸ್ಟೂಮ್ ಎತ್ತಿ ಇಟ್ಟಿದ್ದೇನೆ. ಅದು ನೆನಪು. ಪ್ರತೀ ಸಿನಿಮಾದಲ್ಲಿ ಈ ರೀತಿ ಮಾಡುವ ಅಭ್ಯಾಸವಿದೆ ಎಂದರು.


ಮ್ಯಾಕ್ಸ್ ಸಿನಿಮಾವನ್ನು ಅಪ್ಪ ನೋಡಿ ಖುಷಿ ಪಟ್ಟಿದ್ದಾರೆ. ಕೆಲವೊಂದು ಸನ್ನಿವೇಶಗಳನ್ನು ಅಮ್ಮನ ನೆನಪಾಗಿ ನೋಡಲು ಆಗಲಿಲ್ಲ, ಹೀಗಾಗಿ ನಾನು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಿನಿಮಾ ನೋಡಿಲ್ಲ. ಈ ಚಿತ್ರದ ಮೂಲಕ ಮಗಳು ಸಾನ್ವಿಯನ್ನು ಗಾಯಕಿಯಾಗಿ ಪರಿಚಯ ಮಾಡಿದ್ದೇನೆ, ಅದರ ಸಂಪೂರ್ಣ ಕ್ರೆಡಿಟ್ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಸಲ್ಲಬೇಕು ಎಂದರು.

ನನ್ನ ಮೊದಲ ಕನ್ನಡದ ನಿರ್ಮಾಣದ ಚಿತ್ರ ಗೆದ್ದಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರಿಗೆ, ಕನ್ನಡ ಕಲಾಭಿಮಾನಿಗಳಿಗೆ ಹಾಗೂ ವಿಶೇಷವಾಗಿ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಚಿತ್ರ ಗೆದ್ದಿದೆ. ಈ ಗೆಲವು ತಂಡದ್ದು.‌ ಅವಕಾಶ ನೀಡಿದ ನಿರ್ಮಾಪಕರಿಗೆ, ಕಿಚ್ಚ ಸುದೀಪ್ ಅವರಿಗೆ ಹಾಗೂ ಇಡೀ ತಂಡಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಧನ್ಯವಾದ ತಿಳಿಸಿದರು.

ಕೆ.ಆರ್.ಜಿ ಸಂಸ್ಥೆಯ ಕಾರ್ತಿಕ್ ಗೌಡ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಶೇಖರ್ ಚಂದ್ರ, ಕಲಾ ನಿರ್ದೇಶಕ ಶಿವಕುಮಾರ್, ಸಂಕಲನಕಾರ ಗಣೇಶ್, ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯ, ಕಲಾವಿದರಾದ ಸುಧಾ ಬೆಳವಾಡಿ, ಕರಿ ಸುಬ್ಬು, ಕೃಷ್ಣ ಹೆಬ್ಬಾಳೆ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ, ಜಿ.ಜಿ, ವಿಜಯ್ ಚಂಡೂರ್, ಪ್ರವೀಣ್ ಮುಂತಾದವರು ಚಿತ್ರದ ಗೆಲುವಿನ ಸಂತಸವನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

Tags: Abhinaya ChakravarthyBig boss kannadaChallenging star actor DarshanDarshankannada industryKiccha sudheepmax kannada moviePan India Moviesandalwoodsuccess meetugram manju
Previous Post

MP: ತೇಜಸ್ವಿ ಸೂರ್ಯನಿಗೆ ಕೂಡಿಬಂದ ಕಂಕಣ ಭಾಗ್ಯ..!!

Next Post

ಭವಿಷ್ಯ ಭಾರತದ ಮಾನವ ಸಂಪನ್ಮೂಲಗಳಿಗೆ ಒಂದು ಹೊಸ ದಿಕ್ಕು ದೆಸೆ2025

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಭವಿಷ್ಯ ಭಾರತದ ಮಾನವ ಸಂಪನ್ಮೂಲಗಳಿಗೆ ಒಂದು ಹೊಸ ದಿಕ್ಕು ದೆಸೆ2025

ಭವಿಷ್ಯ ಭಾರತದ ಮಾನವ ಸಂಪನ್ಮೂಲಗಳಿಗೆ ಒಂದು ಹೊಸ ದಿಕ್ಕು ದೆಸೆ2025

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada