• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 17, 2023
in Top Story, ಕರ್ನಾಟಕ
0
ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: “ಕಳೆದ ಮೂರು ದಿನಗಳಿಂದ ನಡೆದ ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ದಾಖಲೆಗಳು ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾಧ್ಯಮಗಳು, ವಿರೋಧ ಪಕ್ಷಗಳ ನಾಯಕ ಟೀಕೆ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.“ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ.

ಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು” ಎಂದು ತಿಳಿಸಿದರು. ಕಾಂಗ್ರೆಸ್ ಹೈಕಮಾಂಡ್ ನಡುಗುತ್ತಿದೆ ಎಂಬ ಆರ್. ಅಶೋಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ನಡುಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಅಲ್ಲ, ಬಿಜೆಪಿ ಹೈಕಮಾಂಡ್. ಈ ಭ್ರಷ್ಟಾಚಾರಕ್ಕೆಲ್ಲ ಅಡಿಪಾಯವೇ ಆರ್.ಅಶೋಕ್, ನಕಲಿ ಸ್ವಾಮಿ, ಲೂಟಿ ರವಿ, ನವರಂಗಿ ನಾರಾಯಣ, ಬ್ಲಾಕ್ ಮೇಲರ್ ಗಳು. ಈ ಅಕ್ರಮಗಳ ಹಿಂದೆ ಇವರ ಹೆಸರಿದೆ. ಅವರು ಯಾರಿಂದ ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಈ ವಿಚಾರವಾಗಿ ತನಿಖೆ ಆಗಲಿ. ಅದನ್ನೇ ನಾವು, ನಮ್ಮ ನಾಯಕರು ಹೇಳುತ್ತಿದ್ದೇವೆ. ಅವರ ಕಾಲದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ಇದಕ್ಕೆ ಅಡಿಪಾಯ.

ಆದಾಯ ತೆರಿಗೆ ಅಧಿಕಾರಿಗಳು ತಮ್ಮ ದಾಳಿ ಮುಗಿಸಿ ಅಧಿಕೃತ ಹೇಳಿಕೆ ಪ್ರಕಟಿಸಲಿ ಎಂದು ನಾವು ಇಷ್ಟು ದಿನ ಮಾತನಾಡಿರಲಿಲ್ಲ. ನಿನ್ನೆ ಐಟಿ ಅಧಿಕಾರಿಗಳು ಹೇಳಿಕೆ ಪ್ರಕಟಿಸಿದ್ದಾರೆ. ಐಟಿ, ಇಡಿ ಎಲ್ಲಾ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಈಗ ಎಲ್ಲಾ ದಾಖಲೆಗಳು ಅವರ ಬಳಿಯೇ ಇವೆ. ಅವುಗಳನ್ನು ಬಿಚ್ಚಿಡಲಿ” ಎಂದು ಸವಾಲೆಸೆದರು. ಬಿಜೆಪಿಯು ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಬಿಡುಗಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಬಿಜೆಪಿಯ ಭ್ರಷ್ಟಾಚಾರ ಹಿಮಾಲಯ ಪರ್ವತದಷ್ಟಿದೆ. ಸಿಎಂ ಹುದ್ದೆಗೆ 2500 ಕೋಟಿ ಕಲೆಕ್ಷನ್ ಮಾಡಲಾಗಿತ್ತು. ಮುಖ್ಯಮಂತ್ರಿ ಕಚೇರಿಯಲ್ಲೇ ಎಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಬಿಜೆಪಿಯ ಶಾಸಕರು, ಮಾಜಿ ಮಂತ್ರಿಗಳೇ ಹೇಳಿದ್ದಾರೆ. ಈಗ ಮಾತಾಡುತ್ತಿರುವವರು ಅದನ್ನು ಒಮ್ಮೆ ನೋಡಲಿ ” ಎಂದು ಕುಟುಕಿದರು.

Tags: BJPdcmdkshivakuamrincome taxKarnataka
Previous Post

ರಾಜ್ಯದಲ್ಲಿ ಐಟಿ ದಾಳಿಯಿಂದ ಕಾಂಗ್ರೆಸ್ ಹೈಕಮಾಂಡ್ ನಡುಗಿದೆ: ಆರ್. ಅಶೋಕ್‌ ವ್ಯಂಗ್ಯ

Next Post

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ

Related Posts

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ
Top Story

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ

by ಪ್ರತಿಧ್ವನಿ
September 28, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಇಂದು ಅವರ ಹೇಳಿಕೆ...

Read moreDetails
HD Kumaraswamy Targets NICE: A Strategy for Political Comeback

ಬಿಡದಿ, ನೈಸ್‌ ಹಿಂದೆ ಬಿದ್ದ ಕುಮಾರಸ್ವಾಮಿ: ರಾಜಕೀಯ ಪುನರಾಗಮನದ ತಂತ್ರವೇ? HD Kumaraswamy

September 28, 2026
ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

September 28, 2026
Breaking :2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

Breaking :2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

September 28, 2026
ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

September 28, 2026
Next Post
ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ

ಅಜಯ್ ರಾಜ್ ಅಭಿನಯದ "ಮನ್ ರೇ " ಚಿತ್ರ ನವೆಂಬರ್ ನಲ್ಲಿ ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada