• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ನಾನು ರಾಜ್ಯಪಾಲರಿಗಾಗಲಿ,ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಾತನಾಡಿ, ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿ, ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ ಎಂದು ತಿರುಗೇಟು ನೀಡಿದರು.

ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಪೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು. ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ.

ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್ ಗೆ ರಾಜೀವ್ ಗಾಂಧಿ ಹೆಸರಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು ಎಂದರು.

18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್ ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ ಕಾರಣ ಎಂದು ಹೇಳಿದರು. ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರು ಕುಟುಂಬ ದುಡಿದಿದೆ.ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ.ಅವರ ವಿಚಾರಗಳನ್ನು ನಾವು ಮರೆಯಬಾರದು ” ಎಂದು ತಿಳಿಸಿದರು.

Tags: CM Siddaramaiah‌Congress PartyDCM DK Shivakumar
Previous Post

ಸಿಎಂ ವಿರುದ್ಧ ತನಿಖೆಗೆ ಅನುಮತಿ:ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ ನಾಳೆ

Next Post

ಹದಿಹರೆಯದ ಹುಡುಗಿಯರು ಲೈಂಗಿಕ ಬಯಕೆ ನಿಯಂತ್ರಿಸಬೇಕು; ಹೈಕೋರ್ಟ್ ಆದೇಶ ರದ್ದು

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಹದಿಹರೆಯದ ಹುಡುಗಿಯರು ಲೈಂಗಿಕ ಬಯಕೆ ನಿಯಂತ್ರಿಸಬೇಕು; ಹೈಕೋರ್ಟ್ ಆದೇಶ ರದ್ದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada