ಕೇಂದ್ರ ಸರ್ಕಾರ Corporate tax ನ್ನು 30 ರಿಂದ 20% ಗೆ ಇಳಿಸಿ, ಜನ ಸಾಮಾನ್ಯರ ತೆರಿಗೆ ಪ್ರಮಾಣ ವಿಪರೀತ ಹೆಚ್ಚಿಸಿತು, ಸತ್ಯ ಎಂದಿಗೂ ಕಹಿಯಾಗಿರುತ್ತದೆ: ಸಿಎಂ

ಕೇಂದ್ರ ಸರ್ಕಾರ Corporate tax ನ್ನು 30 ರಿಂದ 20% ಗೆ ಇಳಿಸಿದ್ದು ನಿಜವಲ್ಲವೇ? ಯಡಿಯೂರಪ್ಪನವರು 2008 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು‘ ನೋಟ್ ಪ್ರಿಂಟ್ ಮಾಡುವ ಮಿಷನ್’ ನಮ್ಮಲ್ಲಿ ಇಲ್ಲ ‘ಎಂದಿರುವುದು ದಾಖಲೆಯಲ್ಲಿ ಇದೆ.
ನಾನು ಮುಖ್ಯಮಂತ್ರಿಯಾಗಿರುವಾಗ 50 ಸಾವಿರದವರೆಗಿನ ಸೊಸೈಟಿ ಸಾಲ ಮನ್ನಾ ಮಾಡಿದ್ದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ.
ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನಗಳೂ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು. ಕಾಂಗ್ರೆಸ್ ಸರ್ಕಾರ ಜಾರಿಮಾಡಿರುವ ಐದು ಗ್ಯಾರಂಟಿಗಳನ್ನು ಬಡವರಿಗೆ ಸಾಮಾಜಿಕ , ಆರ್ಥಿಕವಾಗಿ ಶಕ್ತಿತುಂಬಿದ ಯೋಜನೆಗಳನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲಿ.
ಬಿಜೆಪಿಯವರು ಸುಳ್ಳು ಭಾಷಣ ಮಾಡುವುದರಲ್ಲಿ ನಿಸ್ಸೀಮರು ಎಂದು ಎಲ್ಲರಿಗೂ ತಿಳಿದಿದೆ.

ನಾನು ಉತ್ತರ ನೀಡುವಾಗ ಅಡ್ಡಿಪಡಿಸಿದರೆ, ನಾನು ಯಾರಿಗೂ ಹೆದರುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ತಪ್ಪು ಹುಡುಕಲು ಸಾಧ್ಯವಿಲ್ಲದ್ದರಿಂದ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಶಕ್ತಿ ನೀಡುವುದಿಲ್ಲ ಎಂದು ವಿರೋಧಪಕ್ಷದ ನಾಯಕರು ಹೇಳಿದರು.
ಶಕ್ತಿ ಯೋಜನೆಯಡಿ 409 ಕೋಟಿ ಜನ ಉಚಿತವಾಗಿ ಓಡಾದಿದ್ದಾರೆ. ಇದು ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಶಕ್ತಿ ನೀಡಿದ ಕಾರ್ಯಕ್ರಮ.1.26 ಕೋಟಿ ಅನ್ನಭಾಗ್ಯ ದಡಿ 170 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. 4 ಕೋಟಿಗೂ ಹೆಚ್ಚು ಜನ , ಗ್ಯಾರಂಟಿಗಳಿಂದ ಲಾಭ ಪಡೆದಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಜೀವನ ಸುಧಾರಿಸಿರುವ ಉದಾಹರಣೆಗಳಿವೆ. ಗೃಹಲಕ್ಷ್ಮಿಯ ಫಲಾನುಭವಿಯೊಬ್ಬರು , ಈ ಯೋಜನೆಯಿಂದ 10 ರಿಂದ 20 ಸಾವಿರ ಉಳಿಸಿ , ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸೊಸೆಗೆ ಬಳೆ ಅಂಗಡಿ ಇಟ್ಟುಕೊಟ್ಟಿದ್ದೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು.