ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಕಾವು ರಂಗೇರಿದ್ದು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿಗೆ ಸ್ಥಾನ ನೀಡಿದೆ ಎಂಬ ಕುತೂಹಲ ಹೆಚ್ಚಾಗಿದೆ. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಬಂಡಾಯವನ್ನು ಕಡಿಮೆ ಮಾಡುವ ಸವಾಲು ಕೇಸರಿ ಪಾಳಯದ ಮುಂದಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಇಂದು ಹಾಗೂ ನಾಳೆ ಪಕ್ಷದ ವರಿಷ್ಠರು ಸಭೆ ನಡೆಸುತ್ತಿದ್ದು ಏಪ್ರಿಲ್ 9ರಂದು ರಾಜ್ಯದಲ್ಲಿ ಕೇಸರಿ ಪಾಳದ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಲಿದೆ. ಈ ಎಲ್ಲದರ ನಡುವೆ ಎಂಟಿಬಿ ನಾಗರಾಜು ತನ್ನ ಪುತ್ರನಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ ಎದುರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಎಂಟಿಬಿ ನಾಗರಾಜು, ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ನನ್ನ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದೇನೆ. ನಾನು ಈ ಬಾರಿ ಚುನಾವಣೆಯಲ್ಲಿ ಎಲ್ಲಿಯೂ ಸ್ಪರ್ಧೆ ಮಾಡುತ್ತಿಲ್ಲ/. ಆದರೆ ನನ್ನ ಬದಲು ನನ್ನ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.