PSI ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಪ್ರಮುಖವಾಗಿ ಸಚಿವ ಅಶ್ವತ್ಥ ನಾರಾಯಣ ಗೆಸರು ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ರಾಜೀನಾಮೆಗೂ ವಿಪಕ್ಷಗಳು ಒತ್ತಾಯಿಸಿದ್ದವು. ಆದರೆ ಸಚಿವ ಅಶ್ವತ್ಥನಾರಾಯಣ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಭಾನುವಾರ ಯಲಹಂಕ ನ್ಯೂ ಟೌನ್ ಪೊಲೀಸರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಹೆಸರೇಳಿ, ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ದರ್ಶನ್ ಗೌಡನನ್ನು ಬಂಧಿಸಿದ್ದಾರೆ.