ಬೆಂಗಳೂರು: ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನಾನು ವೈಯಕ್ತಿಕವಾಗಿ 20 ವರ್ಷದಿಂದ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಕಾಂಗ್ರೆಸ್‌ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಇದೆ. ಯಾವತ್ತೂ ಕೂಡ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಮಾನಸಿಕ ಕಿರುಕುಳ ಹತ್ತಿರದಿಂದ ನೋಡಿದ್ದೇನೆ ಎಂದರು.
ಮೈತ್ರಿ ವಿಚಾರ ನನಗೂ ವಯಕ್ತಿಕವಾಗಿ ಅಸಮಾಧಾನ ಇದೆ. ಮಾನಸಿಕವಾಗಿ ಕಿರುಕುಳ ಇದೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ನಮ್ಮ ಮುಂದಿನ ನಿರ್ಧಾರ ಮಾಡ್ತೀನಿ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಆ ಸಂದರ್ಭದಲ್ಲಿ ಒಂದು ಪಕ್ಷದ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಪರಸ್ಪರ ಮತ ಹಾಕಲಿಲ್ಲ. ಆದರೆ ಯಾರೂ ಕೂಡ ಈ ಬಗ್ಗೆ ವಯಕ್ತಿಕವಾಗಿ ಮಾತನಾಡ್ತಿಲ್ಲ ಎಂದರು.
ಆದ್ರೆ ಮೈತ್ರಿ ಬಗ್ಗೆ ಎಲ್ಲರಿಗೂ ಅಸಮಾಧಾನವಂತೂ ಇದೆ. ಆದರೆ ಈ ಕುರಿತಾಗಿ ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚೆ ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಬೆಂಬಲಿಗರು ಬಿಜೆಪಿ ಬಿಡುವ ವಿಚಾರವಾಗಿ ಮಾತನಾಡಿ, ನನ್ನ ಕ್ಷೇತ್ರ ಅಷ್ಟೇ ಅಲ್ಲ, ಆರ್. ಅಶೋಕ್, ಮುನಿರತ್ನ, ದಾಸರಹಳ್ಳಿ ಕ್ಷೇತ್ರಗಳಲ್ಲೂ ಕಾರ್ಯಕರ್ತರು ಹೋಗಿದ್ದಾರೆ. ನಾನು 100% ಬಿಜೆಪಿಯಲ್ಲಿ ಇದ್ದೀನಿ ಹೋಗಿಲ್ಲ. ಆದ್ರೆ ಮೈತ್ರಿ ಬಳಿಕ ಯೋಚನೆ ಮಾಡಬೇಕಿದೆ ಎಂದರು.


