ಯಾವುದೇ ಒತ್ತಡಗಳಿಗೆ ಒಳಗಾಗದೆ, ನಾನು ನಿರಪರಾಧಿಯಾಗಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ (Nagendra) ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Karnataka Maharshi Valmiki Scheduled Tribe Development Corporation Ltd) ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ದಿನಗಳಿಂದ ವರದಿ ಬಿತ್ತರವಾಗುತ್ತಿದ್ದು, ವಿರೋಧ ಪಕ್ಷಗಳು ನನ್ನ ಮೇಲೆ ಆರೋಪಿಸುತ್ತಿದ್ದರು. ಆದರೆ, ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ಆದರೂ ಸರ್ಕಾರಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಸಂಜೆ 7.30ಕ್ಕೆ ಸಿಎಂ ಭೇಟಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.
ನಿಗಮದಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಎಲ್ಲಿಯೂ ಯಾರೂ ನನ್ನ ಹೆಸರು ಪ್ರಸ್ತಾಪ ಮಾಡಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ಆಗಬೇಕು. ನಾನು ಮಂತ್ರಿ ಸ್ಥಾನದಲ್ಲಿ ಇದ್ದರೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.