ರಾಜ್ಯದಲ್ಲಿ ಉಪಚುನಾವಣಾ ದಿನಾಂಕ ಪ್ರಕಟ ಆಗುತ್ತಿದ್ದ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಆ್ಯಕ್ಟೀವ್ ಆಗಿದ್ದಾರೆ. ಚನ್ನಪಟ್ಟಣದ ಖಾಸಗಿ ರೆಸಾರ್ಟ್‌ನಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿರುವ ಯೋಗೇಶ್ವರ್, ಶೇಕಡ 100 ರಷ್ಟು ನಾನೇ NDA ಅಭ್ಯರ್ಥಿ ಆಗ್ತೇನೆ ಎಂದಿದ್ದಾರೆ. ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬರ್ತಾರೆ. ಕುಮಾರಸ್ವಾಮಿ ಬಂದ ಬಳಿಕ ಮಾತನಾಡಿ ಇನ್ನೆರಡು ದಿನಗಳಲ್ಲಿ ಅಂತಿಮವಾಗಿ ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಯೋಗೇಶ್ವರ್ ಸ್ಪರ್ಧೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಜೊತೆ ಯೋಗೇಶ್ವರ್ ಸ್ಪರ್ಧೆ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಚನ್ನಪಟ್ಟಣ ಕುಮಾರಸ್ವಾಮಿ ಅವರ ಸ್ವಕ್ಷೇತ್ರ. ಹೀಗಾಗಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ತೀರ್ಮಾನ ಮಾಡಬೇಕು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ತಯಾರಿ ಮಾಡ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಡಿಕೆ ಶಿವಕುಮಾರ್ ಪಣ ತೊಟ್ಟಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬಾರದು, ಕ್ಷೇತ್ರವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಬೇಕು ಎನ್ನುವ ನಿರ್ಧಾರಕ್ಕೆ ಕುಮಾರಸ್ವಾಮಿ ಬಂದಿದ್ದಾರೆ ಎನ್ನಲಾಗ್ತಿದೆ. ಅಷ್ಟೇ ಅಲ್ಲದೆ ಒಂದು ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿ ಮಾಡಿದ ಬಳಿಕ ಸಿ.ಪಿ ಯೋಗೇಶ್ವರ್ ಉಲ್ಟಾ ಹೊಡೆದರೂ ಗೆಲುವು ಕಾಂಗ್ರೆಸ್ ಪಾಲಾಗುತ್ತದೆ ಎನ್ನುವುದು ಮನವರಿಕೆ ಆಗಿದೆ ಎನ್ನಲಾಗಿದೆ.
ಇನ್ನು ನಿಖಿಲ್ ಕುಮಾರಸ್ವಾಮಿಕೂಡ ಮಂಡ್ಯ ಬಳಿಕ ರಾಮನಗರಕ್ಕೆಬಂದು ಸೋಲುಂಡಿದ್ದು, ಅಂತಿಮವಾಗಿ ಟಿಕೆಟ್ ತೆಗೆದುಕೊಂಡು ಚನ್ನಪಟ್ಟಣದಲ್ಲೂ ಸೋಲುಂಡರೆ ರಾಜಕೀಯ ಜೀವನದಲ್ಲಿ ಕಪ್ಪು ಮಸಿಯಾಗಿ ಉಳಿದುಕೊಳ್ತೇನೆ. ಹೀಗಾಗಿ ನಾನು ಮುಂದಿನ ಸಾರ್ವತ್ರಿಕ ಚುನಾವಣೆ ತನಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ.ಒಂದು ವೇಳೆ ನಾನು ಸ್ಪರ್ಧೆ ಮಾಡಿದರೆ ವಿರೋಧಿಗಳೆಲ್ಲಾ ಒಂದಾಗಿ ಸೋಲಿಸುವ ಸಾಧ್ಯತೆಯೂ ಇದೆ ಎಂದು ತಂದೆಗೆ ತಿಳಿಸಿದ್ದಾರೆ ಎನ್ನಲಾಗ್ತಿದೆ.ಇದೇ ಕಾರಣಕ್ಕೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸ್ಪರ್ಧೆ ಫಿಕ್ಸ್ ಅನ್ನೋ ಸುಳಿವು ಸಿಕ್ಕಿದೆ.