• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನೂ ಪಾಲಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ:ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನು ನೂರಕ್ಕೆ ನೂರು ಪಾಲನೆ ಮಾಡಲಾಗದಿದ್ದರೂ, ಪಾಲಿಸುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಸಹಯೋಗ ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು ಇವರ ವತಿಯಿಂದ ಹೊಟೇಲ್ ರಮಣಶ್ರೀಯಲ್ಲಿ ಆಯೋಜಿಸಿದ್ದ 19ನೇ ವರ್ಷದ“ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ” ಹಾಗೂ ಎಸ್. ಷಡಕ್ಷರಿ ಅವರ‘ಕ್ಷಣ ಹೊತ್ತು ಆಣಿಮುತ್ತು’ ಭಾಗ-14ರ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಶರಣ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವವರನ್ನು ಪ್ರೋತ್ಸಾಹಿಸುವುದು ಬಹಳ ಮುಖ್ಯ.ಬಸವಾದಿ ಶರಣರ ವಿಚಾರಗಳು ಇಡೀ ಜಗತ್ತಿಗೆ ತಲುಪಬೇಕು.ನಮಗೆ ಮಾತ್ರ ಸೀಮಿತವಾಗಿ ತಲುಪಿದರೆ ಸಾಲುವುದಿಲ್ಲ. ಬಸವಾದಿ ಶರಣರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಿದಂತಾಗುತ್ತದೆ. ಸಮಾಜಕ್ಕೆ ಬಸವಣ್ಣ ಮತ್ತು ಅವರ ಅನುಯಾಯಿಗಳ ಕೊಡುಗೆ ಅಪಾರವಾದುದು. ಸಮಾಜದ ಜಾತಿ ವ್ಯವಸ್ಥೆಯಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು:

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದರು.ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಇದೆ.ರಾಜಕೀಯ ಸಮಾನತೆ ಸಿಕ್ಕಿದ್ದರೂ, ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಬಸವಾದಿ ಶರಣರು ಇದನ್ನು 850 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದರು.ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು.

ಇಂದಿಗೂ ಜಾತಿ ವ್ಯವಸ್ಥೆ ಇದ್ದು, ಇದನ್ನು ಹೋಗಲಾಡಿಸಲು ಮಾನವೀಯತೆಯಿಂದ ಕೂಡಿದ ಸಮಾಜ ಅಗತ್ಯ. ಎಲ್ಲರಿಗೂ ಸಮಾನ ಅವಕಾಶಗಳು, ವೈಚಾರಿಕತೆ ಇರಬೇಕು. ಕರ್ಮ ಸಿದ್ಧಾಂತ ಇರಬಾರದು. ಇದನ್ನು ಈಗಲೂ ಬಹಳ ಜನ ಪರಿಪಾಲಿಸುತ್ತಾರೆ. ವಿದ್ಯಾವಂತರೂ ಕೂಡ ಹಣೆಬರಹದಲ್ಲಿ ನಂಬಿಕೆ ಇಡುತ್ತಾರೆ. ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಸಮಾಜದಿಂದ ಮಾತ್ರ ಇದಕ್ಕೆ ಪರಿಹಾರ. ನನಗಾಗಲಿ, ಬಸವರಾಜ ಬೊಮ್ಮಾಯಿ ಅವರಿಗಾಗಲಿ ಮುಖ್ಯಮಂತ್ರಿಯಾಗಲಿದ್ದೀರಿ ಎಂದು ಬರೆದಿದ್ದರೆ ಎಂದು ಪ್ರಶ್ನಿಸಿದರು.

ಮೌಢ್ಯ, ಕಂದಾಚಾರಗಳನ್ನು ಬಿಡಬೇಕು:ಗೊತ್ತಿದ್ದೋ ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಬಸವಾದಿ ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು ಎಂದರು. ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತವೆ. ಇದನ್ನು ಮೊದಲು ನಾವು ಬಿಡಬೇಕು.ಆರ್ಥಿಕ, ಸಾಮಾಜಿಕ ಸಮಾನತೆ ಹೋಗಲಾಡಿಸಲು, ಬಸವಾದಿ ಶರಣರ ಕನಸು ನನಸಾಗಿಸಲು, ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನಗಳು ಆಗಲಿ. ನಾನು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಪ್ರಯತ್ನವನ್ನು ನಿಜವಾಗಿ ಮಾಡುತ್ತಿದ್ದೇನೆ. ಅಸಮಾನತೆ ಹೋಗಬೇಕಾದರೆ ಬದಲಾವಣೆ ಅಗತ್ಯ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಅಸಮಾನತೆ ಹೋಗಲು ಸಾಧ್ಯ. ಆ ಶಕ್ತಿಯನ್ನು ಜನರಲ್ಲಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡೋಣ ಎಂದರು.

Tags: Basavadi SharanBasavanna's ideasbengaluruCM SiddaramaiahCongress PartyI am trying to follow Basavanna's philosophy and idealsRamana Shri Sharan awardees.
Previous Post

‘ಪುಷ್ಪ 2’ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡೇವಿಡ್ ವಾರ್ನರ್..!!

Next Post

ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ “ಕಟ್ಲೆ” ಸಿನಿಮಾದ ಮೊದಲ ಹಾಡು

Related Posts

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆ! ಇಂದಿನಿಂದಲೇ ಜಾರಿ!
Top Story

`LPG’ ಗ್ರಾಹಕರ ಗಮನಕ್ಕೆ : ಸಬ್ಸಿಡಿ ಸಿಲಿಂಡರ್ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!

by ಪ್ರತಿಧ್ವನಿ
September 21, 2026
0

ನವದೆಹಲಿ : ರಿಯಾಯಿತಿ ದರದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ಪಡೆಯುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಗಡುವನ್ನು ನಿಗದಿಪಡಿಸಿದೆ. ಅಕ್ಟೋಬರ್ 1 ರಿಂದ ಸಬ್ಸಿಡಿ ಸಹಿತ...

Read moreDetails
ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ

ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ

September 21, 2026
ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ : ಹೆಚ್.ಕೆ. ಪಾಟೀಲರಿಗೆ ದಿನೇಶ್ ಗೂಳಿಗೌಡ ಬಹಿರಂಗ ಪತ್ರ

ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ : ಹೆಚ್.ಕೆ. ಪಾಟೀಲರಿಗೆ ದಿನೇಶ್ ಗೂಳಿಗೌಡ ಬಹಿರಂಗ ಪತ್ರ

September 21, 2026
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ : 33 ಕಂತಿನ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್.!

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ : 33 ಕಂತಿನ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್.!

September 21, 2026
ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಹೆಚ್.ಕೆ ಪಾಟೀಲ

ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಹೆಚ್.ಕೆ ಪಾಟೀಲ

September 21, 2026
Next Post

ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ "ಕಟ್ಲೆ" ಸಿನಿಮಾದ ಮೊದಲ ಹಾಡು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada