• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 4, 2023
in Top Story, ಕರ್ನಾಟಕ, ರಾಜಕೀಯ
0
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ ಬುದ್ದ, ಬಸವಾದಿ ಶರಣರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ಮುಕ್ತ ಸಮಾಜ ಇರಬೇಕು ಎಂದು ಆಶಿಸಿದ್ದರು.

ಜನರಿಗೆ ಬಸವಣ್ಣ, ಹಡಪದ ಅಪ್ಪಣ್ಣ ಅವರಂಥವರ ಆದರ್ಶ ಮತ್ತು ವಿಚಾರಗಳು ಗೊತ್ತಾಗಬೇಕು. ಅದಕ್ಕಾಗಿ ಸಂತರ, ಬಸವಾದಿ ಶರಣರ ಜನ್ಮ ದಿನಾಚರಣೆಗಳನ್ನು ಆಚರಿಸಬೇಕು ಎಂದರು.

ನಾವು ಬಸವಾದಿ ಶರಣರ ಆಶಯ ಮತ್ತು ಆದರ್ಶಗಳನ್ನು ಮುಂದುವರೆಸುವ ಉದ್ದೇಶದಿಂದಲೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತ ಆಗದೆ ಸರ್ವರಿಗೂ ಅನ್ವಯ ಆಗುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಇದು ವೆರಿ ಸಿಂಪಲ್. ನಮ್ಮ ಯೋಜನೆಗಳ ಹಿಂದಿನ ಕಾಳಜಿಯನ್ನು ಅರ್ಥ ಮಾಡಿಕೊಳ್ಳಲು ಹೃದಯ ಇದ್ದರೆ ಸಾಕು ಎಂದರು.

ಚಾತುವರ್ಣ ವ್ಯವಸ್ಥೆಯ ಜಾತಿ ಕಾರಣಕ್ಕೆ ಶೂದ್ರರು ಮತ್ತು‌ ಮಹಿಳೆಯರು ಕೇವಲ ಉತ್ಪಾದನೆಗೆ ಮಾತ್ರ ಸೀಮಿತವಾಗಿದ್ದರು. ಇವರಿಗೆ ತಮ್ಮ ಉತ್ಪಾದನೆಯನ್ನು ಅನುಭವಿಸುವ ಹಕ್ಕು ಇರಲಿಲ್ಲ. ಯಾರು ಉತ್ಪಾದನೆಯಲ್ಲಿ ತೊಡಗುವುದಿಲ್ಲವೋ ಅವರು ಮಾತ್ರ ಉಳಿದೆಲ್ಲರ ಉತ್ಪಾದನೆಯನ್ನು ಅನುಭವಿಸಬಹುದಿತ್ತು. ಆದ್ದರಿಂದ ಬಸವಾದಿ ಶರಣರು ಈ ಶೋಷಣೆಯುಕ್ತ ಸಮಾಜವನ್ನು ಅಳಿಸಿ ಜಾತಿ ಮುಕ್ತ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು ಎಂದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು. ಶ್ರೀ ಸಚ್ಚಿದಾನಂದ ಚಟ್ನಳ್ಳಿ ಅವರು ಹಡಪದ ಅಪ್ಪಣ್ಣ ಕುರಿತು ಉಪನ್ಯಾಸ ನೀಡಿದರು.

ಕಾಗೆ ಸ್ಮರಿಸಿದ ಸಿಎಂ


ಬಸವಾದಿ ಶರಣರು ಮೌಡ್ಯ ಪರಂಪರೆ ವಿರುದ್ಧ ಹೋರಾಡಿದ್ದನ್ನು ವಿವರಿಸುವ ಸಂದರ್ಭದಲ್ಲಿ ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗವನ್ನು ಸ್ಮರಿಸಿದರು. ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಟಿವಿಗಳಲ್ಲಿ ಭಯಂಕರ ಚರ್ಚೆ ನಡೆಯಿತು. ಒಬ್ಬರು, ನಾನು ಬಜೆಟ್ ಮಂಡಿಸಲ್ಲ ಕುರ್ಚಿ ಕಳ್ಕೊತೀನಿ ಎಂದರು. ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳ್ಕೊತಾರೆ ಎಂದರು. ಆದರೆ ಕಾಗೆ ಹಾರಿಹೋಯ್ತು. ಮೌಡ್ಯದ ಕಾಗೆ ಹಾರಿಸಿದವರೂ ನಾಪತ್ತೆ ಆದ್ರು. ನಾನು ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿ ಅಧಿಕಾರ ಪೂರ್ತಿಯಾಗಿ, ಸಮರ್ಥವಾಗಿ ನಿರ್ವಹಿಸಿದೆ. ಆದ್ದರಿಂದ ಮೌಡ್ಯವನ್ನು ನಂಬಬೇಡಿ ಎಂದು ತಮ್ಮ ಅನುಭವದ ಮೂಲಕವೇ ವಿವರಿಸಿದರು.

Tags: Congress PartyDr.B.R.Ambedkarಸಿದ್ದರಾಮಯ್ಯ
Previous Post

ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ

Next Post

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada