ಪಂಜಾಬ್ ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಾನು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಯಾರಾದರೂ ಸುಳ್ಳು ಭರವಸೆಗಳನ್ನು ಕೇಳಲು ಬಯಸುವವರು ಅವರೆಲ್ಲ ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಕಾಲಿದಳದ ಸುಖಬೀರ್ ಸಿಂಗ್ ಬಾದಲ್ ಅವರ ಭಾಷಣಗಳನ್ನು ಕೇಳಬಹುದು ಎಂದು ಲೇವಡಿ ಮಾಡಿದ್ದಾರೆ.
ಮುಂದುವರೆದು, ಪಂಜಾಬ್ಅನ್ನು ಅಪಾಯದಿಂದ ದೂರವಿಡಬೇಕೆಂದರೆ ಎಲ್ಲರೂ ಒಗ್ಗಟ್ಟಿನಿಂದ ನಡೆಯಬೇಕು. ಗಡಿ ರಾಜ್ಯದಲ್ಲಿ ಶಾಂತಿ ಕಾಪಾಡುವುದು ಮುಖ್ಯ, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಂಜಾಬ್ ಅನ್ನು ಚೆನ್ನಾಗಿ ಅರ್ಥೈಸಿಕೊಂಡಿದೆ ಮತ್ತು ರಾಜ್ಯವನ್ನು ಸುಭಿಕ್ಷವಾಗಿ ಮುನ್ನಡಸುತ್ತದೆ ಎಂದು ವಿಶ್ಲೇಷಿಸಿದರು.