• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ.ಕೆ.ಶಿವಕುಮಾರ್​ನನ್ನು ಹೈಕಮಾಂಡ್​ ಸಿಎಂ ಮಾಡಲ್ಲ ಎಂದು ನಾನು ಹೇಳಿಲ್ಲ ; ಸಿದ್ದರಾಮಯ್ಯ ಸ್ಪಷ್ಟನೆ

Any Mind by Any Mind
April 4, 2023
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ಡಿ.ಕೆ.ಶಿವಕುಮಾರ್​ನನ್ನು ಹೈಕಮಾಂಡ್​ ಸಿಎಂ ಮಾಡಲ್ಲ ಎಂದು ನಾನು ಹೇಳಿಲ್ಲ ; ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ನವದೆಹಲಿ:ಏ.೦೪: ಕಾಂಗ್ರೆಸ್ ಗೆದ್ದರೂ ಹೈಕಮಾಂಡ್​ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲ್ಲ ಎನ್ನುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಇದೀಗ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹರಸಾಹಸ ಪಡುತ್ತಿದೆ. 2ನೇ ಪಟ್ಟಿ ಸಂಬಂಧ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಗೂ ಒಂದು ದಿನ ಮೊದಲೇ ಸಿದ್ದರಾಮಯ್ಯ ಸಿಎಂ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್​ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ಮತ್ತೊಂದು ಹಂತ ತಲುಪುವ ಮುನ್ನವೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಇದಕ್ಕೆ ನವದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದು, ನಾನು ಹೇಳಿದ್ದನ್ನು ತಿರುಚಿದ್ದಾರೆ ಎಂದು ಟ್ವೀಟ್‌ ಮಾಡಿ ಸ್ಪಷ್ಟನೆ ನೀಡಿದ್ದಾರೆ..

ADVERTISEMENT

ಸಿದ್ದರಾಮಯ್ಯ ನೀಡಿರುವ ಟ್ವೀಟ್‌ ಸಾರಾಂಶ

ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಭುಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ. ಸುದ್ದಿವಾಹಿನಿ  ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ಅಂತ ಹೇಳಿದ್ದೆ.

ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ @ndtv ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ.
ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ. 1/2 pic.twitter.com/AnaUspvVqT

— Siddaramaiah (@siddaramaiah) April 4, 2023

ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ.

ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Tags: AICCBJPBJP GovernmentCongress PartyDKShivakumarndtvsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೋಲ್ಡ್‌ ಕಳ್ಳತನ: ಸೋಶಿಯಲ್‌ ಮೀಡಿಯಾ ಸ್ಟಾರ್‌ ಬಂಧನ..!

Next Post

ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR‌ ದಾಖಲು

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR‌ ದಾಖಲು

ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR‌ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada